More

    ಪ್ರಶಾಂತ್ ಮಾಡಾಳ್​ ಬಂಧನ: ಇದಕ್ಕೇ ನಾವು ಲೋಕಾಯುಕ್ತ ಪುನರ್​ಸ್ಥಾಪಿಸಿದ್ದು ಎಂದ ಸಿಎಂ

    ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ (ಮಾ. 02) ತಡರಾತ್ರಿ ವಶಪಡಿಸಿಕೊಂಡಿದ್ದಾರೆ.

    ಕೆಎಸ್​ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು 40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ ಒಟ್ಟು 2.02 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು ಲೋಕಾಯುಕ್ತದ ಪುನರ್​ಸ್ಥಾಪನೆ ಮಾಡಿದ್ದೇ ಇದಕ್ಕೆ ಎಂದಿದ್ದಾರೆ.

    ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ‘ಶಾಸಕರ ಪುತ್ರನ ಮೇಲೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿದ್ದೆ ಇದೇ ಕಾರಣಕ್ಕೆ. ಮುಕ್ತವಾಗಿ ಭ್ರಷ್ಟಾಚಾರ ನಿಗ್ರಹ ಆಗಬೇಕು. ಕಾಂಗ್ರೆಸ್ ಕಾಲದಲ್ಲಿ ಇಂತಹ ಅನೇಕ ಪ್ರಕರಣ ಮುಚ್ಚಿಹೋಗಿವೆ. ನಮ್ಮಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಪ್ರಕರಣದ ಬಗ್ಗೆ ನಿಷ್ಪಕ್ಷವಾದ ತನಿಖೆಯಾಗಲಿ. ಮುಕ್ತವಾಗಿ ತನಿಖೆ ನಡೆದು ಹಣ ಯಾರಿಗೆ ಸೇರಿದೆ ಎನ್ನುವ ಮಾಹಿತಿ ಹೊರಗೆ ಬರಲಿ. ಸತ್ಯ ಜನರಿಗೆ ತಿಳಿದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ’ ಎಂದು ಹೇಳಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts