More

    ರಾಜ್ಯದಲ್ಲಿ ಏಪ್ರಿಲ್​ ಅಂತ್ಯದ ವೇಳೆಗೆ 10 ಕರೊನಾ ವೈರಸ್​ ಸೋಂಕು ಪರೀಕ್ಷೆ ಪ್ರಯೋಗಾಲಯ: ಸುದ್ದಿಗೋಷ್ಠಿಯಲ್ಲಿ ಸಿಎಂ ಯಡಿಯೂರಪ್ಪ

    ಬೆಂಗಳೂರು: ರಾಜ್ಯದಲ್ಲಿ ದಿನೇ, ದಿನೇ ಕರೊನಾ ಸೋಂಕು ಪೀಡಿತರ ಸಂಖ್ಯೆ ಅಧಿಕಗೊಳ್ಳುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಏಪ್ರಿಲ್​ ಅಂತ್ಯದ ವೇಳೆಗೆ ರಾಜ್ಯದಲ್ಲಿ 10 ಕರೊನಾ ಪರೀಕ್ಷಾ ಪ್ರಯೋಗಾಲಯ ಆರಂಭಿಸುವುದಾಗಿ ತಿಳಿಸಿದರು.

    ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

    ಈವರೆಗೆ ರಾಜ್ಯದಲ್ಲಿ 17.168 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಪ್ರಯೋಗಾಲಯ ಆರಂಭಿಸಲಾಗುವುದು. ಕರೊನಾ ಸೋಂಕಿನ ಲಕ್ಷಣ ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದರು.

    ಕರೊನಾ ವೈರಸ್​ ಸೋಂಕಿಗೆ ಪ್ಲಾಸ್ಮ ಚಿಕಿತ್ಸೆ ಪರಿಣಾಮಕಾರಿ ಎನ್ನುತ್ತಿದ್ದಾರೆ. ಹೀಗಾಗಿ ಪ್ಲಾಸ್ಮ ಚಿಕಿತ್ಸೆ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ ಅಮತಿ ಕೋರಿದ್ದೇವೆ. ಇನ್ನು ಅನುಮತಿ ದೊರೆತಿಲ್ಲ.

    ಮಂಡಳಿಯ ಅನುಮತಿಗೆ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.

    ಏಪ್ರಿಲ್​ 20ರ ಬಳಿಕ ಶೇ. 50 ಐಟಿ- ಬಿಟಿ ಸಿಬ್ಬಂದಿ ಕಚೇರಿಗೆ ತೆರಳಲು ಅವಕಾಶ: ಡಾ. ಅಶ್ವತ್ಥ ನಾರಾಯಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts