More

    ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಆರಂಭ

    ಬೆಂಗಳೂರು: ಕೋವಿಡ್ ಸೋಂಕು ದೃಢಪಟ್ಟ ಕಾರಣ ಖಿನ್ನತೆಗೆ ಒಳಗಾದ ಪೇದೆಯೊಬ್ಬರು ಆಂಬುಲೆನ್ಸ್​ನಲ್ಲೇ ಆತ್ಮಹತ್ಯೆಗೆ ಶರಣಾದರು. ಬದುಕನ್ನೇ ದರಂತ ಅಂತ್ಯವಾಗಿಸಿಕೊಂಡ ಕರ್ನಾಟಕ ರಾಜ್ಯ ಮೀಸಲು ಪಡೆಯ ಬೆಂಗಳೂರು ನಗರದ 4ನೇ ಬೆಟಾಲಿಯನ್‌ನ ಸಶಸ್ತ್ರ ಪೇದೆ ಸಾವು ದುಃಖಕರ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.

    ಪೇದೆ ಮಂಜೇಶ್ ಆತ್ಮಹತ್ಯೆ ಬೆನ್ನಲ್ಲೇ ಟ್ವೀಟ್​ ಮೂಲಕ ಸಂತಾಪ ಸೂಚಿಸಿರುವ ಸಿಎಂ, ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಆರಂಭಿಸಲಾಗುತ್ತಿದೆ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿರಿ ಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್​ ಲಾಕ್​ಡೌನ್​?

    ಕರೊನಾ ವಾರಿಯರ್ಸ್​ ಆಗಿರುವ ಪೊಲೀಸ್ ಸಿಬ್ಬಂದಿ ಸೋಂಕು ಮಣಿಸುವ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗಾಗಿಯೇ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.

    ರಾಜ್ಯದಲ್ಲಿ ಒಟ್ಟಾರೆ ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ ಇತರ ಪ್ರಮುಖ ರಾಜ್ಯಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಯಾವುದೇ ಸೋಂಕಿತ ನಾಗರಿಕರು ಹಾಗೂ ಸರ್ಕಾರಿ ಸಿಬ್ಬಂದಿ ದೃತಿಗೆಡುವ ಅಗತ್ಯವಿಲ್ಲ. ಸರ್ಕಾರ ಸದಾ ನಿಮ್ಮ ಜತೆಯಲ್ಲಿರಲಿದೆ ಎಂದು ಬಿಎಸ್​ವೈ ಭರವಸೆ ನೀಡಿದ್ದಾರೆ.

    ಡಿಕೆಶಿ ಸಮ್ಮುಖದಲ್ಲೇ ಕರೊನಾ ನಿಯಮ ಗಾಳಿಗೆ ತೂರಿದ ‘ಕೈ’ ಪಡೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts