‘ಚೆಲುವ ಚಾಮರಾಜನಗರ, ಭರಚುಕ್ಕಿ ಜಲಪಾತೋತ್ಸವ’: ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ: ಸಿಎಂ

ಚಾಮರಾಜನಗರ: ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಚಾಮರಾಜನಗರ ಜಿಲ್ಲಾಡಳಿತ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ’ “ಭರಚುಕ್ಕಿ ಜಲಪಾತೋತ್ಸವ” ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ. ಈ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗ್ತದೆ ಎನ್ನುವ ಮೂಢನಂಬಿಕೆ ಬಿತ್ತಿದ್ದರು. ಆದರೂ ನಾನು ಹತ್ತಕ್ಕೂ ಹೆಚ್ಚು ಬಾರಿ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ಬಂದಿದ್ದೇನೆ. ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ ವಾಮಂಜೂರು ಪರಿಸರಸರದಲ್ಲಿ 11ನೇ ತಿಂಗಳ ಶ್ರಮದಾನ ಸುಮಾರು 400 ಗಿಡಗಳನ್ನು ನೆಟ್ಟ ಸ್ವಯಂಸೇವಕರು

ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್​ನವರು ಅಲ್ಲಾಡಿಸುತ್ತಲೇ ಇದ್ದಾರೆ. ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಲೇ ಇರ್ತೇನೆ. ಸಿದ್ದರಾಮಯ್ಯರ ಕಾಲ್ಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆ ಅಂದರೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದರು.

ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಎಲ್ಲಾ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋಧ್ಯಮ ನೀತಿಯನ್ನೂ ರಚಿಸಲಾಗುವುದು. ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹಸ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕತೆಯ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಬಾಲ್ಯದಲ್ಲೇ ಹೆತ್ತವರ ಕಳೆದುಕೊಂಡ ಅಮನ್​ ಕಷ್ಟ ಕೇಳಿದ್ರೆ ಕಣ್ಣೀರು ತರಿಸುತ್ತೆ; ಕಂಚಿನ ಹಿಂದೆ ಇಷ್ಟೆಲ್ಲಾ ಶ್ರಮವಿದೆ

Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…