ಉಮೇಶ್ ಕತ್ತಿ ಮಗನಾದರೂ ಸಿಎಂ ಆಗಲಿ: ಶ್ರದ್ಧಾಂಜಲಿ ಸಭೆಯಲ್ಲಿ ಈಶ್ವರಪ್ಪ ಆಶಯ

blank

ಶಿವಮೊಗ್ಗ: ಮುಖ್ಯಮಂತ್ರಿಯಾಗಬೇಕೆಂಬ ಕನಸು ಮಾಜಿ ಸಚಿವ ಉಮೇಶ್ ಕತ್ತಿ ಅವರಲ್ಲಿತ್ತು. ನಾನಲ್ಲದಿದ್ದರೆ ನನ್ನ ಮಗನಾದರೂ ಮುಖ್ಯಮಂತ್ರಿ ಆಗಲಿ ಎನ್ನುತ್ತಿದ್ದರು. ಸಿಎಂ ಆಗುವ ಅವರ ಕನಸು ಈಡೇರುವ ಮುನ್ನವೇ ನಮ್ಮನ್ನು ಅಗಲಿದ್ದಾರೆ. ಅವರ ಮಗನಾದರೂ ಭವಿಷ್ಯದಲ್ಲಿ ಸಿಎಂ ಆಗಲಿ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆಶಿಸಿದರು.
ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ಉಮೇಶ್ ಕತ್ತಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಪದೇಪದೆ ಉಮೇಶ್ ಕತ್ತಿ ಹೇಳುತ್ತಿದ್ದರು. ಅದನ್ನು ಅವರು ಗಂಭೀರವಾಗಿ ಹೇಳುತ್ತಿದ್ದರೋ ಅಥವಾ ತಮಾಷೆ ಮಾಡುತ್ತಿದ್ದರೋ ಎಂಬುದು ಕೊನೆಗೂ ತಿಳಿಯಲೇ ಇಲ್ಲ ಎಂದರು.
ಉಮೇಶ್ ಕತ್ತಿ ಸ್ನೇಹಜೀವಿಯಾಗಿದ್ದರು. ಕ್ಷೇತ್ರದಲ್ಲಿ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದರು. ನೊಂದವರಿಗೆ ಸಹಾಯಹಸ್ತ ನೀಡುತ್ತಿದ್ದರು. ಎಲ್ಲರ ಜೊತೆಗೆ ಹಾಸ್ಯ ಪ್ರಜ್ಞೆಯಿಂದ ವರ್ತಿಸುವ ವ್ಯಕ್ತಿತ್ವ ಅವರದ್ದಾಗಿತ್ತು. ಪಕ್ಷಾತೀತವಾಗಿ ಆತ್ಮೀಯರನ್ನು ಕತ್ತಿ ಹೊಂದಿದ್ದರು ಎಂದು ಹೇಳಿದರು.
ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ನಗರ ಪಾಲಿಕೆ ಸದಸ್ಯ ಎಸ್.ಜ್ಞಾನೇಶ್ವರ್, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಪ್ರಮುಖರಾದ ಶಿವರಾಜ್ ಮುಂತಾದವರಿದ್ದರು.

blank

 

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank