More

    ಸಿಎಂ ಮನಬಂದಂತೆ ಮಾತಾಡುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ: ಮಾಜಿ ಸಿಎಂ ಬಿಎಸ್​ವೈ

    ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಮನಬಂದಂತೆ ಮಾತಾಡುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ಮಂಗಳವಾರದಂದು ಬಿಜೆಪಿಯವರ ವಿರುದ್ಧ ಮೊಂಡಾಟ ಪದ ಬಳಕೆ ಮಾಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಬಿಎಸ್​ವೈ, ಸಿಎಂ ಬೇಜವಾಬ್ದಾರಿಯಿಂದ ಮಾತನಾಡುವುದನ್ನು ಇನ್ನಾದರೂ ನಿಲ್ಲಿಸಬೇಕು. ಅವರು ಮನಬಂದಂತೆ ಮಾತಾಡುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ ಎಂದು ಹೇಳಿದ್ದಾರೆ.

    ಇದನ್ನೂ ಓದಿ: 40% ಕಮಿಷನ್ ಹಗರಣ ಆರೋಪ ನ್ಯಾಯಾಂಗ ತನಿಖೆಗೆ: ನ್ಯಾಯ ಸಿಗುವ ವಿಶ್ವಾಸ ಇದೆ ಎಂದ ಮಾಜಿ ಸಿಎಂ ಬೊಮ್ಮಾಯಿ

    ಕಾಂಗ್ರೆಸ್​ ಮನೆಮನೆಗೆ ಗ್ಯಾರಂಟಿ‌ ಕಾರ್ಡ್ ನೀಡಿ, ಅದರ ಮೇಲೆಯೇ ಚುನಾವಣೆ ಮಾಡಿ ಗೆದ್ದಿದ್ದಾರೆ. ಗ್ಯಾರಂಟಿ ಕಾರ್ಡ್​ನಲ್ಲಿರುವುದನ್ನು ಜಾರಿ ಮಾಡಿ ಎಂದು ನಾವು ಹೇಳುತ್ತಿದ್ದೇವೆ. ನಾವು ಹೊಸದಾಗಿ ಏನು ಕೇಳುತ್ತಿಲ್ಲ. ಆದರೆ ಕೊಟ್ಟಿರುವ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸುತ್ತಿದ್ದೇವೆ. ಈ ವಿಚಾರವನ್ನು ನಾವು ಇಲ್ಲಿಗೆ ಕೈಬಿಡುವುದಿಲ್ಲ. ನಾವು ಪ್ರತಿ ಜಿಲ್ಲೆಗಳಿಗೆ ಹೋಗಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಎಚ್ಚರಿಕೆಯನ್ನು ನೀಡಿದ್ದಾರೆ.

    ವಿಪಕ್ಷ ನಾಯಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇವತ್ತು ಆಯ್ಕೆ:
    ಪ್ರತಿಪಕ್ಷದ ನಾಯಕರು ಯಾರಾಗಬೇಕು, ರಾಜ್ಯಾಧ್ಯಕ್ಷರು ಯಾರಾಗಬೇಕು ಎಂದು ಕೇಂದ್ರದವರು ಬಂದು ಅಭಿಪ್ರಾಯ ಸಂಗ್ರಹಿಸಿ ಹೋಗಿದ್ದಾರೆ. ಇವತ್ತು ಅಮಿತ್ ಷಾ, ಪ್ರಧಾನಿಯವರ ಜತೆ ಚರ್ಚೆ ಮಾಡಿ ಒಂದು ತೀರ್ಮಾನಕ್ಕೆ ಬರುತ್ತಾರೆ. ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾಯ್ದು ನೋಡಬೇಕು. ಬಹುತೇಕ ಇವತ್ತು ಆಯ್ಕೆ ಪ್ರಕ್ರಿಯೆ ಆಗಬಹುದು ಎಂದು ಬಿಎಸ್​ವೈ ಹೇಳಿದ್ದಾರೆ.

    ಲಿಂಗಾಯತ ಸಮುದಾಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒತ್ತಾಯವನ್ನು ಯಾರು ಮಾಡಿದ್ದಾರೆ ಎಂದು ತಮಗೆ ಗೊತ್ತಿಲ್ಲ, ಅದು ಅವರಿಗೆ ಬಿಟ್ಟ ವಿಚಾರ, ರಾಜ್ಯಾಧ್ಯಕ್ಷ ಯಾರದರೂ ಸ್ವಾಗತವಿದೆ ಎಂದು ಮಾಜಿ ಸಿಎಂ ಬಿಎಸ್​ವೈ ಹೇಳಿದ್ದಾರೆ.(ಏಜೆನ್ಸೀಸ್​​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts