More

    ದೌರ್ಜನ್ಯಕ್ಕೊಳಗಾದ ಮಹಿಳಾ ಕುಸ್ತಿಪಟುಗಳನ್ನು ತಕ್ಷಣ ಬಿಡುಗಡೆ ಮಾಡಿ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಕುಸ್ತಿಪಟುಗಳು ಕಳೆದ ಹಲವು ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್​ ಮಂತರ್​ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಈಗ ಮತ್ತೊಂದು ಹಂತ ತಲುಪಿದೆ.

    ಇನ್ನು ಪ್ರತಿಭಟನಾ ನಿರತ ಕುಸ್ತಿಪಟುಗಳು ಭಾನುವಾರ(ಮೇ 28)ರಂದು ಉದ್ಘಾಟನೆಗೊಂಡ ನೂತನ ಸಂಸತ್​ ಭವನದ ಎದುರು ಪ್ರತಿಭಟನಾ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

    ಇನ್ನು ಕುಸ್ತಿಪಟುಗಳ ಮೇಲಿನ ಪೊಲೀಸ್​ ದೌರ್ಜನ್ಯವನ್ನು ವಿರೋಧ ಪಕ್ಷಗಳು ಖಂಡಿಸಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

    Siddaramaiah Tweet

    ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ನರೇಂದ್ರ ಮೋದಿ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದು ಕಿಡಿಕಾರಿದ್ದಾರೆ.

    ಇದನ್ನೂ ಓದಿ: ಜೈಲಿನಿಂದ ಹೊರಬಂದ ಬಳಿಕ ಸತ್ಯೇಂದರ್​ ಜೈನ್​ರನ್ನು ಭೇಟಿ ಮಾಡಿದ ಕೇಜ್ರಿವಾಲ್​

    Siddaramaiah Tweet

    ಕೇಂದ್ರ ಬಿಜೆಪಿ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್​ಭೂಷಣ್​ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ​ ಮೂಲಕ ಆಗ್ರಹಿಸಿದ್ದಾರೆ.

    Siddaramaiah Tweet

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts