ನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಟುವಾಗಿ ಟೀಕಿಸಿದ ಕೇಂದ್ರ ಸಚಿವರು, ನೀತಿ ಆಯೋಗದ ಆಹ್ವಾನಿತ ಸದಸ್ಯರಾದ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರ ಕೇಂದ್ರದೊಂದಿಗೆ ನಿರಂತರವಾಗಿ ಸಂಘರ್ಷ ನಡೆಸುತ್ತಿದೆ. ಅದಕ್ಕೆ ವಿಶ್ವಾಸದ ಕೊರತೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಕೇಂದ್ರದ ಬಜೆಟ್ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿಲ್ಲ: ಬಸವರಾಜ ಬೊಮ್ಮಾಯಿ
ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಇಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿ, ಇಂಥ ವಿಶ್ವಾಸದ ಕೊರತೆಯಿಂದ ಒಕ್ಕೂಟ ವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ರಾಜ್ಯಕ್ಕೆ ಒಳ್ಳೆಯದು ಮಾಡುವ ನೈಜ ಉದ್ದೇಶ ಇದ್ದಿದ್ದರೆ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು ಎಂದು ಹೇಳಿದರು.
Attended the 9th Governing Council Meeting of @NITIAayog. Heard the insightful views of Chief Ministers. pic.twitter.com/UIHv3N1B3c
— Narendra Modi (@narendramodi) July 27, 2024
ಇಂತಹ ವಿಶ್ವಾಸ ಕೊರತೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎನ್ನುವುದರಲ್ಲಿ ಸಂಶಯ ಇಲ್ಲ ಇಂದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಸಭೆಯನ್ನು ಕರೆದು ‘ವಿಕಸಿತ ಭಾರತʼದ ಗುರಿ ಸಾಧಿಸುವ ಬಗ್ಗೆ ಚರ್ಚಿಸಿದರು. ಅದಕ್ಕಾಗಿ ತಮ್ಮ ಮುನ್ನೋಟವನ್ನು ಸಭೆಯಲ್ಲಿ ಪ್ರಸುತ್ತಪಡಿಸಿದರು. ಕರ್ನಾಟಕವೂ ಸೇರಿ ಎಲ್ಲಾ ರಾಜ್ಯಗಳು ಭಾಗವಹಿಸಬೇಕಿತ್ತು ಎನ್ನುವುದು ನನ್ನ ಅಭಿಪ್ರಾಯ ಎಂದು ಕುಮಾರಸ್ವಾಮಿ ಹೇಳಿದರು.
ಸಭೆಗೆ ಬರದೆ ಏನು ಸಾಧನೆ ಮಾಡ್ತಾರೆ: ಸಭೆಗೆ ಎನ್ಡಿಎ ಒಕ್ಕೂಟದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಬಂದಿದ್ದರು. ನಿತೀಶ್ ಕುಮಾರ್ ಅವರು ಆರೋಗ್ಯದ ಸಮಸ್ಯೆಯಿಂದ ಬಂದಿರಲಿಲ್ಲ. ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ, ದೆಹಲಿ, ಹಿಮಾಚಲ ಪ್ರದೇಶ, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದರು. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಅಭಿವೃದ್ಧಿ ಮತ್ತು ಆ ರಾಜ್ಯಗಳ ಜನರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಇದರಿಂದ ಅವರು ಏನು ಸಾಧನೆ ಮಾಡುತ್ತಾರೆ. ಅನ್ಯಾಯ ಆಗಿದ್ದರೆ ಸಭೆಯಲ್ಲಿ ಬಂದು ಚರ್ಚಿಸಬೇಕಾಗಿತ್ತು. ಬೀದಿಯಲ್ಲಿ ನಿಂತು ಮಾತನಾಡಿದರೆ ಏನು ಸಿಗುತ್ತದೆ? ಎಂದು ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸರ್ಕಾರ ಕೇಂದ್ರದೊಂದಿಗೆ ನಿರಂತರವಾಗಿ ಒಂದಲ್ಲ ಒಂದು ಕಾರಣಕ್ಕೆ ಸಂಘರ್ಷ ಮಾಡಿಕೊಳ್ಳುತ್ತಿದೆ. ರಾಜ್ಯ ಸರ್ಕಾರದ ವಿಶ್ವಾಸದ ಕೊರತೆಯಿಂದ ಕೂಡಿದೆ. ಒಕ್ಕೂಟ ವ್ಯವಸ್ಥೆಗೆ ಇದು ಒಳ್ಳೆದಲ್ಲ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ದೂರಿದರು.
‘ಗ್ರೇಟರ್ ಬೆಂಗಳೂರು’ ನಿರ್ಮಾಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್‌ಪ್ಲಾನ್; ಇಲ್ಲಿದೆ ಸಭೆಯ ವಿವರ