ರಾಜ್ಯ ಬಜೆಟ್​ 2025| ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ವಿಶೇಷ ಮೀಸಲಾತಿ ಘೋಷಿಸಿದ ಸಿಎಂ

Siddaramaiah Budget
Published on

ಬೆಂಗಳೂರು: 2025-26ನೇ ಸಾಲಿನ ಬಜೆಟ್ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ಘೋಷಿಸಿದ್ದಾರೆ.

ಅದರಂತೆ ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20ರಷ್ಟು ಮೀಸಲಾತಿ ಘೋಷಿಸಿದ್ದಾರೆ. 

Siddaramaiah Budget

ಇನ್ನೂ ಬಜೆಟ್​ನಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಲಾಗಿದ್ದು, ವೃತ್ತಿ ತೆರಿಗೆಯನ್ನು 200 ರೂ. ರಿಂದ 300 ರೂ.ಗೆ ಏರಿಕೆ ಮಾಡಲಾಗಿದೆ. ಇದಲ್ಲದೆ ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಮೂಲಸೌಕರ್ಯ ಅಭಿವೃದ್ಧಿ ಹೊಸ ಕಾರ್ಯಕ್ರಮ ಜಾರಿ ಮಾಡಲಾಗಿದ್ದು, ಈ ಯೋಜನೆಯಡಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದ ರಸ್ತೆ, ಸಣ್ಣ ನೀರಾವರಿ, ಮೂಲ ಸೌಕರ್ಯಗಳಿಗೆ 8 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಘೋಷಿಸಲಾಗಿದೆ.

ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್​ಗಳಲ್ಲಿ ಏಕರೂಪದ ದರನಿಗದಿ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ. ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net