ವಯನಾಡು ಭೂಕುಸಿತ; ಸಂತ್ರಸ್ತರಿಗೆ ಕರ್ನಾಟಕದ ವತಿಯಿಂದ 100 ಮನೆಗಳ ನಿರ್ಮಾಣ: ಸಿಎಂ ಸಿದ್ದರಾಮಯ್ಯ

CM Siddaramaiah

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಲ್ಲಿ 320ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚಾರಣೆ ಬಿರುಸಿನಿಂದ ಸಾಗಿದ್ದು, ಅಗತ್ಯ ನೆರವು ಒದಗಿಸುವುದಾಗಿ ಹಾಗೂ ಸಂತ್ರಸ್ತರಿಗಾಗಿ ನೂರು ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಕೇರಳ ಸರ್ಕಾರದೊಂದಿಗೆ ನಾವು ಇದ್ದೇವೆ. ಅಗತ್ಯ ನೆರವು ಒದಗಿಸುವುದರೊಂದಿಗೆ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿಕೊಡುವ ಮೂಲಕ ನಾವು ಒಟ್ಟಾಗಿ ಅಲ್ಲಿನ ಜನರ ಬದುಕಿನಲ್ಲಿ ಮತ್ತೊಮ್ಮೆ ಭರವಸೆಯ ಆಶಾಕಿರಣವನ್ನು ಮೂಡಿಸೋಣ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜೀವಂತ ಸಮಾಧಿ ಮಾಡಲಾಗಿದ್ದ ಯುವಕನನ್ನು ಮಣ್ಣು ಅಗೆದು ಬದುಕಿಸಿದ ಬೀದಿ ನಾಯಿಗಳು

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ  ಕಾಂಗ್ರೆಸ್​ ವತಿಯಿಂದ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದ್ದರು. ಇದಲ್ಲದೆ ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನವನ್ನು ಸೆಳೆಯುವುದಾಗಿ ತಿಳಿಸಿದ್ದರು.

ಜುಲೈ 30ರಂದು ಮುಂಡಕ್ಕೈ, ಚೂರಲ್‌ಮಲ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 320ರ ಗಡಿ ದಾಟಿದೆ. ಇನ್ನೂ 350ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಭಾರಿ ಯಂತ್ರಗಳ ಮೂಲಕ ಕಲ್ಲುಬಂಡೆಗಳನ್ನು ತೆರುವುಗೊಳಿಸಿ, ಅವಶೇಷಗಳಡಿ ಸಿಲುಕಿರುವವರನ್ನು ಹೊರಕ್ಕೆ ತರಲು ರಕ್ಷಣಾ ತಂಡಗಳು ಎಡಬಿಡದೆ ಕಾರ್ಯಾಚರಣೆ ನಡೆಸುತ್ತಿದೆ. 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

Share This Article

ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್​ ಇರಬಹುದು!!

ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…