More

    ಅವರು ಈ ಕೆಲಸ ಮಾಡಿದ್ರೆ ತೋರಿಸಿ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಸಿಎಂ ನೇರ ಸವಾಲ್

    ದಾವಣಗೆರೆ: ಇಂದು ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಪರ ಪ್ರಚಾರದ ಅಂಗವಾಗಿ ನಡೆದ ಪ್ರಜಾಧ್ವನಿ- ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

    ಇದನ್ನೂ ಓದಿ: ನೀನೆಲ್ಲೂ ಹೋಗಬಾರದು.. ಬಟ್ಟೆ ಬದಲಾಯಿಸು… ಸೆಟ್​ನಲ್ಲಿ ನಡೆದ ಕಿರುಕುಳ ಘಟನೆಯನ್ನು ಬಹಿರಂಗಗೊಳಿಸಿದ ನಟಿ

    “7% ಇರುವ ಕುರುಬ ಸಮುದಾಯಕ್ಕೆ ಬಿಜೆಪಿ ಒಂದೂ ಟಿಕೆಟ್ ಕೊಟ್ಟಿಲ್ವಲ್ಲಾ ನಿಮಗೆ ಸಿಟ್ಟು ಬರಲ್ವಾ? ಬಿಜೆಪಿ ಸೋತಾಗಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲ್ಲ. ಇಲ್ಲಿ ಗಾಯತ್ರಿ ಸಿದ್ದೇಶ್ವರ್ ಯಾವುದೇ ಕಾರಣಕ್ಕೂ ಗೆಲ್ಲಲ್ಲ. ಬಿಜೆಪಿ ಕುಮ್ಮಕ್ಕಿನಿಂದ ಪಕ್ಷೇತರವಾಗಿ ಸ್ಪರ್ಧಿಸಿರುವ ವಿನಯ್ ಕುಮಾರ್​ಗೆ ಒಂದೂ ಮತ ಹಾಕಬೇಡಿ. ವಿನಯ್​ಗೆ ಬೀಳುವ ಮತ ಬಿಜೆಪಿಗೆ ಬಿದ್ದ ಹಾಗೆ. ಕಾಂಗ್ರೆಸ್ ಪಕ್ಷದ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಶಕ್ತಿ ಬರುತ್ತದೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ” ಎಂದು ಸಿಎಂ ಮನವಿ ಮಾಡಿದರು.

    “ರಾಜ್ಯದ ಪರವಾಗಿ, ದಾವಣಗೆರೆ ಜಿಲ್ಲೆಯ ಪರವಾಗಿ, ಹೊನ್ನಾಳಿ ಜನರ ಪರವಾಗಿ ಒಂದೇ ಒಂದು ದಿನವೂ ಬಿಜೆಪಿ ಸಂಸದ ಸಿದ್ದೇಶ್ವರ್ ಅವರು ಪಾರ್ಲಿಮೆಂಟಿನಲ್ಲಿ ಬಾಯಿ ಬಿಡಲಿಲ್ಲ. ಹೀಗಾಗಿ ಬಿಜೆಪಿಗೆ ನೀವು ಹಾಕುವ ಮತಕ್ಕೆ ಬೆಲೆ ಬರಲಿಲ್ಲ. ರಾಜ್ಯಕ್ಕೆ ಆರ್ಥಿಕವಾಗಿ ಬಿಜೆಪಿ ಸರ್ಕಾರ ತೀವ್ರ ಅನ್ಯಾಯ ಮಾಡಿತು. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯಕ್ಕೆ ಅನ್ಯಾಯವಾಯಿತು. ಆಗಲೂ ಸಿದ್ದೇಶ್ವರ್ ಬಾಯಿ ಬಿಡಲಿಲ್ಲ. ಮತ್ತೆ ಇವರನ್ನು ಪಾರ್ಲಿಮೆಂಟಿಗೆ ಕಳುಹಿಸಿ ಏನು ಪ್ರಯೋಜನವಾಯ್ತು? ಬರಿ ಟಿ.ಎ, ಡಿ.ಎ ತಗೊಳೋಕೆ, ದೆಹಲಿಯಲ್ಲಿ ಶೋಕಿ ಮಾಡೋಕೆ ಪಾರ್ಲಿಮೆಂಟಿಗೆ ಕಳಿಸಿದ್ದಾ?” ಎಂದು ಪ್ರಶ್ನಿಸಿದರು.

    ಇದನ್ನೂ ಓದಿ: ಜೋಗಿಬೆಟ್ಟಿಗೆ ಬೇಡ ಬೈಪಾಸ್ -ಬ್ಯಾನರ್ ಅಳವಡಿಸಿ ಗ್ರಾಮಸ್ಥರ ಆಗ್ರಹ

    “ಹತ್ತತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಎರಡು ಬಾರಿ ಮುಖ್ಯಮಂತ್ರಿಯಾಗಿ ನಾವು ರಾಜ್ಯದಲ್ಲಿ ಜಾರಿಮಾಡಿದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು, ಭಾಗ್ಯಗಳ ಪಟ್ಟಿ ನಾಡಿನ ಜನರ ಬಳಿ ಕೇಳಿ ಅವರೇ ಕೊಡುತ್ತಾರೆ. ನೀವು ಪ್ರಧಾನಿಯಾಗಿ ಮಾಡಿದ ಸಾಧನೆಗಳನ್ನು ತಾಕತ್ತಿದ್ದರೆ ಭಾರತೀಯರ ಮುಂದೆ ಹೇಳಿ ನೋಡೋಣ” ಎಂದರು.

    “ಮೋದಿಯವರ ಸಾಧನೆಗಳ ಪಟ್ಟಿ ಹಾಕಬೇಕು ಎಂದರೆ ಅವರು ಹೇಳಿದ ಸುಳ್ಳುಗಳ ಪಟ್ಟಿ ಮಾಡಬಹುದು, ಭಾರತೀಯರಿಗೆ ಹಾಕಿದ ಮೂರು ನಾಮಗಳ ಪಟ್ಟಿ ಮಾಡಬಹುದು, ಕನ್ನಡಿಗರ ಕೈಗೆ ಕೊಟ್ಟ ಚೊಂಬಿನ ಪಟ್ಟಿ ಮಾಡಬಹುದು ಅಷ್ಟೆ” ಎಂದು ಪ್ರಧಾನಿ ವಿರುದ್ಧ ಲೇವಡಿ ಮಾಡಿದರು.

    5 ರೂ. ಪಾರ್ಲೆ-ಜಿ ಬಿಸ್ಕತ್​ ಬೆಲೆ ದುಬೈ, ಪಾಕಿಸ್ತಾನ ರಾಷ್ಟ್ರಗಳಲ್ಲಿ ಎಷ್ಟಿದೆ ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!

    ಡೆಲ್ಲಿ ವಿರುದ್ಧದ ಸೋಲಿಗೆ ತಿಲಕ್ ವರ್ಮ ಕಾರಣ ಎಂದ ಹಾರ್ದಿಕ್ ಪಾಂಡ್ಯ! ನೀನೆಂಥ ಕ್ಯಾಪ್ಟನ್​? ಫ್ಯಾನ್ಸ್​ ಕಿಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts