More

    ನಾನು ಅಯೋಧ್ಯೆಗೆ ಭೇಟಿ ಕೊಡುತ್ತೇನೆಂದು ಹೇಳಿಯೇ ಇಲ್ಲ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ರಾಮಮಂದಿರದ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ನಾನು ಅಯೋಧ್ಯೆಗೆ ಭೇಟಿ ಕೊಡುತ್ತೇನೆಂದು ಹೇಳಿಯೇ ಇಲ್ಲ. ನಾನು ರಾಮನ ವಿರೋಧಿಯೂ ಅಲ್ಲ, ರಾಮಮಂದಿರ ನಿರ್ಮಾಣದ ವಿರೋಧಿಯೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಕನಕ ಗುರುಪೀಠದಲ್ಲಿ ಆಯೋಜಿಸಲಾಗಿದ್ದ ಹಾಲುಮತ ಸಂಸ್ಕೃತಿ ವೈಭವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ನಾನು ಅಯೋಧ್ಯೆಗೆ ಭೇಟಿ ಕೊಡುತ್ತೇನೆಂದು ಬಿಜೆಪಿ ಹರಿಬಿಟ್ಟ ಹಾಗೂ ಮಾಧ್ಯಮಗಳು ಸೃಷ್ಟಿಸಿದ ಸುದ್ದಿ ಇದು ಎಂದು ಕಿಡಿಕಾರಿದ್ದಾರೆ.

    ನಾನು ರಾಮನ ವಿರೋಧಿಯೂ ಅಲ್ಲ, ರಾಮಮಂದಿರ ನಿರ್ಮಾಣದ ವಿರೋಧಿಯೂ ಅಲ್ಲ. ಅಯೋಧ್ಯೆಗೆ ಭೇಟಿ ಕೊಡುತ್ತೇನೆ ಎಂದೂ ಹೇಳಿಲ್ಲ. ಆದರೆ ರಾಮಮಂದಿರ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಅಥವಾ 22ರ ನಂತರ ಅಯೋಧ್ಯೆಗೆ ಭೇಟಿ ಕೊಡುತ್ತೇನೆ ಎಂದೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿ: ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್​; ಏನದು?

    ಮುಂಬರುವ ಲೋಕಸಬೆ ಚುನಾವಣೆಗೆ ಸಂಬಂಧಿಸಿದಂತೆ ನಾನಾಗಲಿ ಯತೀಂದ್ರ ಆಗಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಸಂಸದ ಪ್ರತಾಪ್ ಸಿಂಹ ಅವರಿಗೆ ಸೋಲಿನ ಹೆದರಿಕೆ ಶುರುವಾಗಿದ್ದು, ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಸಚಿವರು ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ಗೃಹ ಲಕ್ಷ್ಮಿ ಯೋಜನೆಯಡಿ ಕೊಡುವ ₹2 ಸಾವಿರ ಯಾವುದಕ್ಕೂ ಸಾಲುವುದಿಲ್ಲ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರಧಾನಿ ಹಾಗೂ ಮುಖ್ಯಮಂತ್ರಿಯಾದಾಗ ಒಂದು ನೂರು ರೂಪಾಯಿ ಸಹ ಜನರಿಗೆ ನೀಡಿಲ್ಲ. ಈ ಕುರಿತು ಮಾತನಾಡಲು ಅವರು ಅರ್ಹರಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts