More

    ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

    ಬೆಂಗಳೂರು: ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ (ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿ:ಸೈಬರ್ ವಂಚನೆ ತಡೆಯಲು ‘ಬ್ರೌಸ್ ಸೇಫ್​​ಗೆ ಸಚಿವ ಪ್ರಿಯಾಂಕ್ ಚಾಲನೆ

    ಸೋಮವಾರ ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಸರ್ಕಾರಿ ರಜೆ ಇಲ್ಲ. ನಾಳೆ ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ. ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

    ರಾಮ ಪ್ರಾಣ ಪ್ರತಿಷ್ಠಾಪನೆ ದಿನದಿಂದು ರಾಜ್ಯದಲ್ಲಿ ರಜೆ ನೀಡಬೇಕೆಂದು ಬಿಜೆಪಿ, ಜೆಡಿಎಸ್​ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋರಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಕೂಡಾ ಇದೇ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಆದರೆ ಭಾನುವಾರ (ಇಂದು) ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ.

     

    ಕಲಾವಿದನ ಕೈಚಳಕದಲ್ಲಿ ಅರಳಿದ ಅಯೋಧ್ಯಾ ಶ್ರೀರಾಮಮಂದಿರ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts