More

    ‘ತಾ ಕಳ್ಳ, ಇತರರ ನಂಬ’: ಮಾಜಿ ಸಿಎಂ ವಿರುದ್ಧ ಸಿಎಂ ವಾಗ್ದಾಳಿ; ವಿಷಯ ಇದು..

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ, ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ‘ತಾ ಕಳ್ಳ ಇತರರ ನಂಬ’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದಿದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಜೊತೆಗಿನ ಪೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಕುಮಾರಸ್ವಾಮಿ ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯ ವೈರಲ್ ವಿಡಿಯೋ; ಸರ್ಕಾರದ ವಸೂಲಿ ಬಿಸ್​ನೆಸ್ ಹಾದಿಬೀದಿಗೆ ಬಂದಿದೆ ಎಂದ ಮಾಜಿ ಸಿಎಂ ಎಚ್​ಡಿಕೆ

    ಪೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ), ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿ ಆಗಬೇಕಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ ಎಂದು ಸಿಎಂ ತಮ್ಮ ಪೋಸ್ಟ್​ನಲ್ಲಿ ಆ ಕುರಿತ ಕೆಲವು ದಾಖಲೆಗಳನ್ನೂ ಹಂಚಿಕೊಂಡಿದ್ದಾರೆ.

    ಇದನ್ನೂ ಓದಿ: ತಂದೆಗೆ ಫೋನ್​ ಮಾಡಿ ಲಿಸ್ಟ್​ ಬಗ್ಗೆ ಮಾತನಾಡಿದ ಯತೀಂದ್ರ; ವಿಡಿಯೋ ವೈರಲ್​…!

    ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನರು ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

    ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ಸಿಎಂ ಟೀಕಿಸಿದ್ದಾರೆ.

    ವಿಶ್ವಕಪ್ ಕ್ರಿಕೆಟ್​, ಇಂದು ಗೆಲುವು ಯಾರಿಗೆ?: ಇಲ್ಲಿದೆ ಮಾಹಿತಿ; ಈತ ನಿನ್ನೆಯ ಸೆಮಿಫೈನಲ್ ಬಗ್ಗೆ ಮೊನ್ನೆ ಹೇಳಿದ್ದೂ ನಿಜವಾಗಿತ್ತು!

    ‘ದೇವ್ರು’ ಮೆಚ್ಚೋ ಆಟ ಆಡಿದ ವಿರಾಟ್​: ‘ಆ ದಿನ ನನಗೆ ನಗು ತಡೆಯಲು ಆಗಲಿಲ್ಲ’ ಎಂದ ಸಚಿನ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts