ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿಯನ್ನು ನಿರ್ವಹಣೇತರ ಹುದ್ದೆಗಳಿಗೆ ಶೇಕಡಾ 70ರಷ್ಟು ಮತ್ತು ನಿರ್ವಹಣಾ ಮಟ್ಟದ ಹುದ್ದೆಗಳಿಗೆ ಶೇಕಡಾ 50ಕ್ಕೆ ಸೀಮಿತಗೊಳಿಸಲಾಗಿದೆ ಎಂದು ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಬುಧವಾರ(ಜುಲೈ 17) ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ: ಕರ್ನಾಟಕದಲ್ಲಿ ಕನ್ನಡಿಗರ ಮೀಸಲಾತಿ ಮಸೂದೆ; ಉದ್ಯಮಿ ಕಿರಣ್ ಮಜುಂದಾರ್ ಶಾ ಹೇಳಿದ್ದೇನು?
ಖಾಸಗಿ ಕಂಪನಿಗಳಲ್ಲಿ ಎಲ್ಲಾ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100ರಷ್ಟು ಮೀಸಲಾತಿ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್ಗೆ ಬಂದ ವಿರೋಧದ ನಡುವೆ ಸಂತೋಷ್ ಲಾಡ್ ಈ ಸ್ಪಷ್ಟನೆ ನೀಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ನಿರ್ಧಾರ ಪ್ರಕಟಿಸಿದ್ದ ಪೋಸ್ಟ್ ಅನ್ನು ಸದ್ಯ ಡಿಲೀಟ್ ಮಾಡಿದ್ದಾರೆ. ಕನ್ನಡ ನಾಡಿನಲ್ಲಿ ಯಾವುದೇ ಕನ್ನಡಿಗರು ಉದ್ಯೋಗದಿಂದ ವಂಚಿತರಾಗಬಾರದು ಮತ್ತು ಅವರು ಶಾಂತಿಯುತ ಜೀವನ ನಡೆಸುವಂತಾಗಬೇಕು ಎಂಬುದು ನಮ್ಮ ಸರ್ಕಾರದ ಆಶಯ . ನಮ್ಮದು ಕನ್ನಡ ಪರ ಸರ್ಕಾರ ಎಂದು ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದರು.
ಖಾಸಗಿ ವಲಯದಲ್ಲಿನ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹೊಸ ಮಸೂದೆ ಪ್ರಕಾರ ಸ್ಥಳಿಯರು ಹುದ್ದೆ ಪಡೆಯಲು, ಅಭ್ಯರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಹೊಂದಿರುವ ಮಾಧ್ಯಮಿಕ ಶಾಲಾ ಪ್ರಮಾಣಪತ್ರವನ್ನು ಹೊಂದಿರಬೇಕು ಅಥವಾ ಕನ್ನಡ ಪ್ರಾವೀಣ್ಯತೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸೂಕ್ತ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ ಮೂರು ವರ್ಷಗಳಲ್ಲಿ ಸ್ಥಳೀಯ ಪ್ರತಿಭೆಗಳಿಗೆ ತರಬೇತಿ ಮತ್ತು ತೊಡಗಿಸಿಕೊಳ್ಳಲು ಕಂಪನಿಗಳಿಗೆ ಬಿಲ್ ಕಡ್ಡಾಯವಾಗಿದೆ. ಇದು 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವ ಕನ್ನಡದಲ್ಲಿ ನಿರರ್ಗಳವಾಗಿ ಮತ್ತು ನೋಡಲ್ ಏಜೆನ್ಸಿ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಸ್ಥಳೀಯ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ.
ಬ್ಲಾಕ್ಬಸ್ಟರ್ ಕಲ್ಕಿ 2898 AD ಒಟಿಟಿಯಲ್ಲಿ ಬಿಡುಗಡೆ; ಯಾವಾಗ ಸ್ಟ್ರೀಮಿಂಗ್ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್