More

    ಉಡುಪಿ-ದಕ್ಷಿಣಕನ್ನಡ ಜಿಲ್ಲೆಗಳ ಬಳಿಕ ಸ್ವಂತ ಜಿಲ್ಲೆ ಬಗ್ಗೆಯೂ ಸಿದ್ದರಾಮಯ್ಯ ತೀವ್ರ ಬೇಸರ!; ಕಾರಣ?

    ಬೆಂಗಳೂರು: ಕೆಲವು ದಿನಗಳ ಹಿಂದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಜಿಲ್ಲೆಗಳ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಇದೀಗ ಅವರು ತಮ್ಮ ಸ್ವಂತ ಜಿಲ್ಲೆ ಮೈಸೂರಿನ ಬಗ್ಗೆಯೂ ಅದೇ ಬೇಸರ ವ್ಯಕ್ತಪಡಿಸಿದ್ದಾರೆ.

    ಮೈಸೂರು ಜಿಲ್ಲೆ ಶಿಕ್ಷಣ ಸೂಚ್ಯಂಕದಲ್ಲಿ 16ನೇ ಸ್ಥಾನದಲ್ಲಿದೆ ಎಂದರೆ ನಾಚಿಕೆಗೇಡು. ಇದನ್ನು ನಾನು ಸಹಿಸಲ್ಲ. ಶಿಕ್ಷಣ, ಆರೋಗ್ಯ ಸೂಚ್ಯಂಕ ಸೇರಿ ಎಲ್ಲ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಮೈಸೂರು ಮಾದರಿ ಜಿಲ್ಲೆಯಾಗಲೇಬೇಕು. ಅಧಿಕಾರಿಗಳು ಆ ರೀತಿ ದಕ್ಷತೆ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಬೇಕು ಎಂದು ಅವರು ತಾಕೀತು ಮಾಡಿದ್ದಾರೆ.

    ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಪ್ರಾಧಿಕಾರದ ಸಭೆಯಲ್ಲಿ ಇಂದೇನಾಯ್ತು?

    ನಿನ್ನೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಆರು ತಿಂಗಳ ಬಳಿಕ ಮತ್ತೆ ಕೆಡಿಪಿ ಸಭೆ ನಡೆಸುತ್ತೇನೆ. ಅಷ್ಟರೊಳಗೆ ಪರಿಸ್ಥಿತಿ ಸುಧಾರಿಸಬೇಕು. ಪ್ರಗತಿಯ ವೇಗ ಹೆಚ್ಚಾಗಬೇಕು. ಇಲ್ಲದಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೊಣೆ ಮಾಡುತ್ತೇನೆ. ಪ್ರಿಮೆಚ್ಯೂರ್​ ಎನ್ನುವುದನ್ನೂ ನೋಡದೆ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಇದನ್ನೂ ಓದಿ: ಸಾಕ್ಷರತೆ, ಆರೋಗ್ಯ ಸೂಚ್ಯಂಕ ಎರಡರಲ್ಲೂ ದಕ್ಷಿಣಕನ್ನಡ-ಉಡುಪಿ ಹಿಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಿಎಂ

    ಇದೇ ತಿಂಗಳ 1ರಂದು ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾಗಲೂ ಇಂಥದ್ದೇ ಎಚ್ಚರಿಕೆ ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಸಾಕ್ಷರತೆಯಲ್ಲಿ ಹಿಂದಕ್ಕೆ ಹೋಗ್ತಿದೆ ಯಾಕೆ? ಎಂದು ಪ್ರಶ್ನೆ ಮಾಡಿದ್ದರು. 2017ರಲ್ಲಿ ಸಾಕ್ಷರತೆ ಪ್ರಮಾಣದಲ್ಲಿ ದಕ್ಷಿಣಕನ್ನಡ ಎರಡನೇ ಸ್ಥಾನದಲ್ಲಿತ್ತು, 2020ರಲ್ಲಿ 15ನೇ ಸ್ಥಾನ, 2023ರಲ್ಲಿ 17ನೇ ಸ್ಥಾನಕ್ಕೆ ಹೋಗಿದೆ. ಸಾಕ್ಷರತೆಯಲ್ಲಿ ಮುಂದಿದ್ದ ದಕ್ಷಿಣಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂಥ ಸ್ಥಿತಿಯಾಗಿದ್ದು ಯಾಕೆ? ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದರು.

    ಸಾಕ್ಷರತೆ, ಆರೋಗ್ಯ ಸೂಚ್ಯಂಕ ಪ್ರಮಾಣ ಕುಸಿತ ಆಗ್ತಿರೋದು ಒಳ್ಳೆಯ ಲಕ್ಷಣವೇ? ಆರೋಗ್ಯ ಸೂಚ್ಯಂಕದಲ್ಲಿ 2015ರಲ್ಲಿ 3ನೇ ಸ್ಥಾನ ಇದ್ದುದು ಈಗ 23ನೇ ಸ್ಥಾನದಲ್ಲಿದೆ ಎಂದ ಸಿದ್ದರಾಮಯ್ಯ, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಅಧಿಕಾರಿ ಮತ್ತು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

    ಜನ್ಮದಿನ ಆಚರಿಸಿಕೊಳ್ಳುವವರಿಗೆ ವಂಡರ್ಲಾದಲ್ಲಿ ಉಚಿತ ಟಿಕೆಟ್​; ಇಲ್ಲಿದೆ ವಿವರ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts