More

    ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಿದಕ್ಕೆ ಸಿಎಂ ಸಿದ್ದರಾಮಯ್ಯ ವಿಷಾದ!

    ಬೆಂಗಳೂರು: ಬಿಜೆಪಿಯನ್ನು ಟೀಕಿಸುವ ಭರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನಲ್ಲಿ ಸಂಬೋಧಿಸಿದ್ದಕ್ಕೆ ಬಿಜೆಪಿ ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ತಮ್ಮ ಮಾತಿಗೆ ಸಿಎಂ ವಿಷಾಷ ವ್ಯಕ್ತಪಡಿಸಿದ್ದಾರೆ. ಬಾಯಿತಪ್ಪಿನಿಂದ ಏಕವಚನದಲ್ಲಿ ಸಂಬೋಧಿಸಿದ್ದೇನೆ. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    ಇದನ್ನೂ ಓದಿ: ‘ಪ್ರಧಾನಿ ನರೇಂದ್ರ ಮೋದಿ ವಿಷ್ಣುವಿನ 11ನೇ ಅವತಾರ’!..ಖರ್ಗೆ ಹೀಗಂದಿದ್ಯಾಕೆ?

    ಚಿತ್ರದುರ್ಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಆಯೋಜಿಸಿದ್ದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ರಾಷ್ಟ್ರಪತಿಯನ್ನು ಏಕವಚನದಲ್ಲಿ ಉಲ್ಲೇಖಿಸಿದ್ದರು. ಆಕ್ರೋಶ, ವಿವಾದ ಜೋರಾಗುತ್ತಿದ್ದಂತೆ ಕ್ಷಮೆ ಕೋರಿದ್ದಾರೆ.

    ಮುಖ್ಯಮಂತ್ರಿಯವರ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿದ್ದರಾಮಯ್ಯ ವಜಾಗೆ ಆಗ್ರಹಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸಿದ್ದಾರಾಮಯ್ಯ ಟ್ವೀಟ್ ಮೂಲಕ ವಿಷಾಧ ವ್ಯಕ್ತಪಡಿಸಿದ್ದಾರೆ.

    ಸಿದ್ದರಾಮಯ್ಯ ಹೇಳಿದ್ದಿಷ್ಟು: ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ. ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ.ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    ಮತ್ತೆ ಕಿಡಿ ಕಾರಿದ ಬಿಜೆಪಿ: ಸಿದ್ದರಾಮಯ್ಯ ವಿಷಾಧ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಮತ್ತೆ ಕಿಡಿ ಕಾರಿದ್ದಾರೆ. ಮಾತನಾಡುವಾಗ ಏಕಚವನದಲ್ಲಿ ಮಾತನಾಡಿ ಬಳಿಕ ಅದಕ್ಕೆ ಗ್ರಾಮೀಣ ಶೈಲಿ ಅನ್ನೋ ತೇಪೆ ಹಚ್ಚುವುದನ್ನು ಎಷ್ಟು ವರ್ಷ ಮಾಡುತ್ತೀರಿ ಎಂದು ಬಿಜೆಪಿ ನಾಯಕ ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.

    ತಂಗಿ ಮದುವೆಗೆ ಗ್ರೀನ್​ ಸಿಗ್ನಲ್​ ಕೊಟ್ಟ ಸಾಯಿಪಲ್ಲವಿ ಇನ್ನೂ ಸಿಂಗಲ್‌ ಆಗಿರೋದ್ಯಾಕೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts