More

    ವಿದ್ಯಾರ್ಥಿನಿಯಿಂದ ಸಿದ್ದರಾಮಯ್ಯಗೆ ಫ್ರೀ ಬಸ್​ನ ಟಿಕೆಟ್ ಹಾರ! ಸಂತಸಪಟ್ಟ ಸಿಎಂ ಹೇಳಿದ್ದಿಷ್ಟು

    ಹಾಸನ: ಲೋಕಸಭಾ ಚುನಾವಣಾ ಪ್ರಚಾರಕ್ಕೆಂದು ಹಾಸನದ ಅರಸೀಕೆರೆಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಅರಸೀಕೆರೆಯ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್​ನ ಟಿಕೆಟ್​ ಬಳಸಿಕೊಂಡು ವಿಶೇಷ ರೀತಿಯಲ್ಲಿ ಹಾರವೊಂದನ್ನು ಸಿಎಂಗೆಂದು ತಯಾರಿಸಿ, ಅದನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಭಾರೀ ಸಂತಸ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ನಾನು ಇವ್ರ ಮಾತು ಕೇಳಿ ತಪ್ಪು ಮಾಡಿ, ಇಂದು ಅನುಭವಿಸುತ್ತಿದ್ದೇನೆ: ಭಾವುಕಳಾದ ಪರಿಣಿತಿ

    ಈ ಬಗ್ಗೆ ತಮ್ಮ ಮಾತನಾಡಿದ ಸಿಎಂ, “ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್​ಗಳ ಮಾಲೆ, ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು. ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಶಃ ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ, ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್​ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು” ಎಂದರು.

    “ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್​ಗಳನ್ನು ಸಂಗ್ರಹಿಸಿಟ್ಟಿದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ’’ ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು” ಎಂದು ಸಂತಸ ವ್ಯಕ್ತಪಡಿಸಿದರು.

    ಇದನ್ನೂ ಓದಿ: ಇಂದಿಗೂ ಜೀವಂತವಿದೆ ಸುಂದರಿಯರ ಬೆತ್ತಲೆ ದೇಹದ ಮೇಲೆ ಆಹಾರ ಸವಿಯೋ ವಿಚಿತ್ರ ಪದ್ಧತಿ!

    “ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವಂತವಳಾಗು” ಎಂದು ಹಾರೈಸಿದೆ ಎಂದಿದ್ದಾರೆ.

    4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

    ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ? ಮಹಿಳೆಯರಿಗೇ ಹೆಚ್ಚು ಆಪತ್ತು! ವರದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts