More

    ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಅನುಮೋದನೆ ನೀಡಿದ ಸಿಎಂ

    ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವುದು, ಜನಸಾಮಾನ್ಯರ ದಿಕ್ಕನ್ನು ತಪ್ಪಿಸುವಂತ ನಕಲಿ ಸುದ್ದಿಗಳ ತಡೆಗೆ ಮುಂದಾದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಇದೀಗ ಅನುಮೋದನೆ ನೀಡಿದ್ದಾರೆ.

    ಇದನ್ನೂ ಓದಿ: Miscreants Wastes Petrol, Diesel At Pandavapura Fuel Station | ಸಿಬ್ಬಂದಿ ಇಲ್ಲದ ವೇಳೆ ಪೆಟ್ರೋಲ್, ಡೀಸೆಲ್ ಹೊರಬಿಟ್ಟು ಕಿಡಿಗೇಡಿಗಳು ಪರಾರಿ

    ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಅನುಮೋದನೆ ನೀಡಿದ್ದು, ಸುಳ್ಳು ಸುದ್ದಿ ಪತ್ತೆ, ನಿಯಂತ್ರಣ ಮತ್ತು ಕಠಿಣ ಶಿಕ್ಷೆಗೆ ತುರ್ತು ಕ್ರಮ ಜರುಗಿಸುವ ಮೂರು ಹಂತಗಳ ಕ್ರಮಕ್ಕೆ ಸೂಚಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆ ಸುಳ್ಳು ಸುದ್ದಿ ಸೃಷ್ಡಿಸುವ ಸಿಂಡಿಕೇಟ್​ಗಳ ಪಟ್ಟಿ ಪತ್ತೆ ಹಚ್ಚಲು ಶಿಸ್ತಿನ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

    ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯವಿದೆ. ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯವಿರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಇದೀಗ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ.

    ಇದನ್ನೂ ಓದಿ:  ಕಾಲೇಜು ಕಟ್ಟಡದ ಒಳಗೆ ಸಾವಿಗೆ ಶರಣಾದ ಹುನಗುಂದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ

    ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಎಸ್​ಓಪಿಸಿ (SOPC) ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಂಡಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂರು ಹಂತಗಳ ಕ್ರಮಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.

    ಬಿಡುಗಡೆಗೆ ಸಜ್ಜಾಯ್ತು ತೆಲುಗು ವರ್ಷನ್​ನ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts