More

    ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ; ಮಳೆ ಹಾನಿ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ

    ಬೆಂಗಳೂರು: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಾಕಷ್ಟು ಚರ್ಚಿಸಿರುವ ಸಿಎಂ ಮಳೆ ಹಾನಿ ತಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ.

    ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡುವುದಿಲ್ಲ. ಎಚ್ಚರಿಕೆ ಕೊಡುತ್ತಿದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಖಡಕ್ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ: ಪಾರದರ್ಶಕವಾಗಿ ಸದನ ನಡೆಸುತ್ತೇನೆ: ಯು.ಟಿ.ಖಾದರ್

    ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಸೂಚನೆಗಳು

    1. ರಾಜ್ಯದ ಕೆಲವು ಭಾಗದಲ್ಲಿ ಮಳೆಯಾಗುತ್ತಿದ್ದು, ಬಿತ್ತನೆ ಪ್ರಾರಂಭವಾಗಿದೆ. ಜೂನ್​​ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

    2. ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು.

    3. ಮಳೆ ಬಂದು ಮರಗಳು ಬಿದ್ದು ಹೋದರೆ, ಕೂಡಲೇ ತೆರವು ಗೊಳಿಸಬೇಕು. ವಿದ್ಯುತ್ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲವಾಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

    4. ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್​ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.

    ಇದನ್ನೂ ಓದಿ: ಪ್ರಧಾನಿ ಮೋದಿ ‘ಬಾಸ್’: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್

    5. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು.

    6. ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು.

    7. ಜಿಲ್ಲಾಧಿಕಾರಿಗಳು, ಸಿಇಓಗಳದ್ದು ಜವಾಬ್ದಾರಿಯುತ ಸ್ಥಾನ. ಜತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು.

    8. ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ-ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts