

ಹಾಸನ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗಯ ಮೊದಲನೇ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಸೆಪ್ಟೆಂಬರ್ 06) ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಉಸ್ತುವರಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಸಚಿವರ ಸಮ್ಮುಖದಲ್ಲಿ ಸಿಎಂ ಯೋಜನೆಯನ್ನು ಉದ್ಘಾಟಿಸಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆ ಶಂಕುಸ್ಥಾಪನೆಗೊಂಡ ದಶಕಗಳ ಬಳಿಕ ಉದ್ಘಾಟನೆ ಭಾಗ್ಯ ಕಂಡಿದೆ.
ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಎತ್ತಿನ ಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಟೇಪು ಕತ್ತರಿಸುವ ಮೂಲಕ ಚಾಲನೆ ನೀಡಿದರು. ಉದ್ಘಾಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಯೋಜನಾ ಘಟಕದಲ್ಲಿ ಸುತ್ತು ಹಾಕಿ ವಿವರ ಪಡೆದುಕೊಂಡರು, ಈ ವೇಳೆ ಅವರಿಗೆ ಸಚಿವ ಸಂಪುಟದ ಸಹೋದ್ಯೋಗಿಗಳು ಸಾಥ್ ನೀಡಿದರು.