

ಬೆಂಗಳೂರು: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಕೆನಡಿಯನ್ ಇಂಟರ್ನ್ಯಾಷನಲ್ ಸ್ಕೂಲ್ ಆಫ್ ಬೆಂಗಳೂರಿನಲ್ಲಿ 12ನೇ ತರಗತಿ ಪಾಸಾಗಿದ್ದು, ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಜರಾಗಿದ್ದರು.
ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅವರ ಮಗ ಧವನ್ ರಾಕೇಶ್ ಕೆನಡಿಯನ್ ಇಂಟರ್ನ್ಯಾಷನಲ್ ಸ್ಕೂಲ್ ಆಫ್ ಬೆಂಗಳೂರಿನಲ್ಲಿ 12ನೇ ತರಗತಿ ಪಾಸಾಗಿದ್ದು, ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಇಂದು ಶಾಲೆಯಲ್ಲಿ ಬೀಳ್ಕೊಡುಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಉಪಸ್ಥಿತರಿದ್ದು, ಬಳಿಕ ಮೊಮ್ಮಗ ಪಾಸಾದ ಖುಷಿಯನ್ನು ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ.
ಇದೇ ವಿಧಾನಸಭೆ ಚುನಾವಣೆಯಲ್ಲಿ ವರುಣ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದ ತಾತನ ಪರ ಧವನ್ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದರು. ಆ ಸಂದರ್ಭದಲ್ಲಿ ಧವನ್ ಕನ್ನಡದಲ್ಲಿ ಆಡಿದ್ದ ಮಾತುಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೊಳಗಾಗಿದ್ದವು.