ವಕ್ಫ್​ ಮಂಡಳಿ ಕಾನೂನು ತಿದ್ದುಪಡಿ ಮಸೂದೆ ಮಂಡನೆಗೆ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!

cm

ಮೈಸೂರು: ಬಿಜೆಪಿ ಹಾಗೂ ಎನ್​ಡಿಎಗೆ ಅಲ್ಪಸಂಖ್ಯಾತರ ಮೇಲೆ ಕೋಪವಿದೆ. ಇದರಿಂದ ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

blank

ಇದನ್ನೂ ಓದಿ: ದೆಹಲಿ: 20 ಲಕ್ಷ ರೂ. ಲಂಚ ಪಡೆಯುವಾಗ ಇ.ಡಿ ಸಹಾಯಕ ನಿರ್ದೇಶಕ ಸಿಬಿಐ ಬಲೆಗೆ

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿಗೆ ಕೇದ್ರ ಸರ್ಕಾರ ಪ್ರಯತ್ನಿಸುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಎಂದಿಗೂ ಜಾತ್ಯಾತೀತತೆ, ಸಾಮಾಜಿಕ ನ್ಯಾಯದ ಪರವಾಗಿ ನಿಂತವರಲ್ಲ. ಬಿಜೆಪಿ ಮೊದಲಿನಿಂದಲೂ ಕೋಮುವಾದಿ ಪಕ್ಷವಾಗಿಯೇ ಗುರುತಿಸಿಕೊಂಡಿದ್ದು, ಜಾತ್ಯಾತೀತ ತತ್ವವನ್ನು ನಂಬುವುದಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಮತಾಂತರ ನಿಷೇಧ ಕಾನೂನು, ಗೋಹತ್ಯೆ ತಿದ್ದುಪಡಿಗಳನ್ನು ಜಾರಿಗೆ ತಂದ ಬಿಜೆಪಿಯವರು ಇಂದು ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿ ಪ್ರಯತ್ನಕ್ಕೂ ಕೈಹಾಕಿದ್ದಾರೆ. ವಕ್ಫ್ ಬೋರ್ಡ್ ಕಾನೂನು ಆ ಸಮುದಾಯದ ವೈಯಕ್ತಿಕ ಕಾನೂನಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವುದು ಸಂವಿಧಾನ ಬಾಹಿರ. ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ, ಕೇಂದ್ರದ ಈ ನಿಲುವನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದರು.

ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಆರ್ ಟಿ ಐ ಕಾರ್ಯಕರ್ತರು ಮುಖ್ಯಮಂತ್ರಿಗಳ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸುಳ್ಳು ಕೇಸುಗಳನ್ನು ದಾಖಲಿಸಿದರೆ, ಅವು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದರು.

ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರನ್ನ ಭೇಟಿಯಾದ ಪವನ್‌ ಕಲ್ಯಾಣ್‌; ಕಾರಣವೇನು?

Share This Article
blank

ಕಾಲುಗಳಲ್ಲಿ ರಕ್ತನಾಳಗಳು ಗೋಚರಿಸಲು ಕಾರಣ ಏನು ಗೊತ್ತೆ?: ಅಪಾಯದ ಬಗ್ಗೆ ಅರಿವಿರಲಿ | Visible Veins

Visible Veins: ನಿಮ್ಮ ಕಾಲುಗಳಲ್ಲಿ ಅಥವಾ ನಮ್ಮ ಅಕ್ಕಪಕ್ಕದವರ ಮನೆಯಲ್ಲಿನ ಕೆಲವರಿಗೆ ಈ ರಕ್ತನಾಳಗಳು ಗೋಚರಿಸಿರುವುದು…

ಸಾಲ ಕೊಡಬೇಡಿ.. ನಿಮಗೆ ಸಮಸ್ಯೆಗಳು ಎದುರಾಗುತ್ತವೆ! money

money : ಸಂತೋಷ ಮತ್ತು ದುಃಖಗಳಿಂದ ತುಂಬಿರುವ ಜೀವನದಲ್ಲಿ ಹಣವು ಎಲ್ಲದಕ್ಕೂ ಮೂಲ ಮೂಲ ಎಂದು…

blank