ಹುಬ್ಬಳ್ಳಿ: ಕಳೆದ ಗುರುವಾರ ಮುಸ್ಲಿಂ ಯುವಕನಿಂದ ಭೀಕರವಾಗಿ ಹತ್ಯೆಗೀಡಾಗಿದ್ದ ಬಿವಿಬಿ ಕಾಲೇಜು ವಿದ್ಯಾರ್ಥಿನಿ, ಪಾಲಿಕೆಯ ಕಾಂಗ್ರೆಸ್ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಹುಬ್ಬಳ್ಳಿಯ ಬಿಡನಾಳದಲ್ಲಿರುವ ನಿರಂಜನ್ ಹಿರೇಮಠ್ ಮನೆಗೆ ಭೇಟಿ ನೀಡಿದ ಸಿಎಂ ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಕುಟುಂಬಸ್ಥರಿಗೆ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಐಪಿಎಲ್ನಲ್ಲಿ ಮತ್ತೊಂದು ದಾಖಲೆ ಬರೆಯಲು ಸಜ್ಜಾದ ವಿರಾಟ್ ಕೊಹ್ಲಿ
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿದ್ಯಾರ್ಥಿನಿ ನೇಹಾ ಹಿರೇಮಠ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಮಾಡುತ್ತಿದ್ದಾರೆ. ವಿಶೇಷ ಕೋರ್ಟ್ಗೆ ತನಿಖಾಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸುತ್ತಾರೆ. ಆದಷ್ಟು ಬೇಗ ಆರೋಪಿಗೆ ಶಿಕ್ಷೆ ಆಗುತ್ತೆ. ನೇಹಾ ಕುಟುಂಬದವರ ಜತೆಗೆ ನಾವಿರುತ್ತೇವೆ, ರಕ್ಷಣೆ ಕೊಡುತ್ತೇವೆ ಎಂದು ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ಬಳಿಕ ಮಾತನಾಡಿದ ನಿರಂಜನ್ ಹಿರೇಮಠ್, ಸಿಎಂ ಅವರ ಬಳಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದೇವೆ. ರಾಜ್ಯಾದ್ಯಂತ ಅನೇಕರು ಎಲ್ಲಾ ರೀತಿಯ ಹೋರಾಟ ಮಾಡಿದ್ದರಿಂದ ನಮಗೆ ಶಕ್ತಿ ಬಂದಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಫಯಾಜ್ನನ್ನು ಗಲ್ಲಿಗೇರಿಸಿದ ಮೇಲೆಯೇ ನಮಗೆ ಸಮಾಧಾನವಾಗುತ್ತದೆ. ಈ ಸಂಬಂಧ ವಿಶೇಷ ಕಾನೂನು ರಚಿಸುವಂತೆ ಸಿಎಂ ಅವರ ಬಳಿ ಮನವಿ ಮಾಡಿರುವುದಾಗಿ ನಿರಂಜನ್ ಹಿರೇಮಠ್ ಮುಖ್ಯಮಂತ್ರಿಗಳ ಭೇಟಿ ಬಳಿಕ ತಿಳಿಸಿದ್ದಾರೆ.