More

    ಉಡುಪಿ ಕಾಲೇಜಿನಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ: SITಗೆ ವಹಿಸುವ ಪ್ರಶ್ನೆಯೇ ಇಲ್ಲವೆಂದ ಸಿಎಂ ಸಿದ್ದರಾಮಯ್ಯ

    ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್​ಐಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

    ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಳಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಕ್ಕಳಾಟಿಕೆಯಾಗದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದರು.

    ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯ ಅವಾಂತರ; ಶವಾಗಾರದಲ್ಲಿರುವ ಮೃತ ದೇಹವನ್ನು ಕಚ್ಚಿ ತಿನ್ನುತ್ತಿರುವ ಇಲಿಗಳು

    ಪ್ರಗತಿ ಪರಿಶೀಲನೆ

    ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್​ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

    ನೈತಿಕ ಪೊಲೀಸ್ ಗಿರಿ: ನಿರ್ದಾಕ್ಷಿಣ್ಯ ಕ್ರಮ

    ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

    ಸೌಜನ್ಯ ಪ್ರಕರಣ: ಮೇಲ್ಮನವಿ ಸಲ್ಲಿ ಸುವ ಕುರಿತು ಪರಿಶೀಲನೆ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ, ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

    ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ

    ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು.

    ಇದನ್ನೂ ಓದಿ: ಫೇಸ್​ಬುಕ್​ನಲ್ಲಿ ಹೆಣ್ಣಿನ ವ್ಯಾಮೋಹದ ಬಲೆಗೆ ಬಿದ್ದು 41 ಲಕ್ಷ ರೂ. ಕಳೆದುಕೊಂಡ ರಾಮನಗರ ಯುವಕ!

    ಪರಿಸರ ಸಂರಕ್ಷಣೆಯಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ

    ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ. ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ ಎಂದರು.

    ಬಿಟ್ ಕಾಯಿನ್

    ಬಿಟ್ ಕಾಯಿನ್ ವಿಚಾರದಲ್ಲಿ ಎಸ್.ಐ.ಟಿ ವತಿಯಿಂದ ಇನ್ನೂ ಯಾರಿಗೂ ನೋಟೀಸು ಹೋಗದಿರುವ ಬಗ್ಗೆ ಮಾತನಾಡಿ ಎಸ್.ಐ.ಟಿ ಕ್ರಮ ವಹಿಸುತ್ತದೆ ಎಂದರು.

    ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯ? ಪರಿಶೀಲನೆಗೆ ಮುಂದಾಗಿದೆ ಈ ರಾಜ್ಯ..

    ಸರ್ಕಾರಿ ಆಸ್ಪತ್ರೆಯ ಅವಾಂತರ; ಶವಾಗಾರದಲ್ಲಿರುವ ಮೃತ ದೇಹವನ್ನು ಕಚ್ಚಿ ತಿನ್ನುತ್ತಿರುವ ಇಲಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts