More

  ಪಾಕ್​ ಪರ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

  ಬೆಂಗಳೂರು: ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಒಳಗಡೆ ಕೆಲ ಕಾಂಗ್ರೆಸ್​ ಕಾರ್ಯಕರ್ತರು ‘ಪಾಕಿಸ್ತಾನ್​ ಜಿಂದಾಬಾದ್​’ ಎಂದು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಆರೋಪ ಸಾಬೀತಾದರೆ ಯಾರೇ ಆಗಲಿ ಅಂಥವರ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಎಂದಿದ್ದಾರೆ.

  ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿರುವುದು ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್.ಎಸ್.ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ, ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು ಎಕ್ಸ್​ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

  ಏನಿದು ಪ್ರಕರಣ?
  ನಿನ್ನೆ (ಫೆ.27) ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ನಾರಾಯಣಸಾ ಭಾಂಡಗೆ ಅವರನ್ನು ಪಕ್ಷದ ಮುಖಂಡರು ಕಾರ್ಯಕರ್ತರು ವಿಜಯೋತ್ಸವ ಘೋಷಣೆ ಹಾಕಿ ಕರೆತಂದರು. ಈ ವೇಳೆ ಜೈ ಶ್ರೀರಾಮ್ ಘೋಷಣೆ ಕೂಡ ಮೊಳಗಿತು. ಈ ಘೋಷಣೆ ಅಲ್ಲಿದ್ದ ಕೆಲವು ಕಾಂಗ್ರೆಸ್ ಕಾರ್ಯಕರ್ತರಿಗೆ ಇರುಸುಮುರಿಸು ಉಂಟುಮಾಡಿತು. ಅವರು ಜೈ ಭೀಮ್ ಜೈ ಬಸವಣ್ಣ ಎಂದು ಕೂಗಿದರೂ ದನಿ ದೊಡ್ಡದಾಗಿರಲಿಲ್ಲ. ಕೆಲ ನಿಮಿಷಗಳ ಬಳಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳು ಮತದಾನ ಕೇಂದ್ರದಿಂದ ಹೊರಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ವಿಧಾನಸೌಧದ ವಿಧಾನಸಭೆ ಮುಂಭಾಗದ ಲಾಂಜ್​ನಲ್ಲಿ ಕಾಯುತ್ತಿದ್ದ ಕಾರ್ಯಕರ್ತರು, ನಾಸೀರ್ ಹುಸೇನ್ ಆಗಮಿಸುತ್ತಿದ್ದಂತೆ ಘೋಷಣೆ ಕೂಗಿದರು. ಈ ವೇಳೆ ನಾಸೀರ್ ಪಕ್ಕದಲ್ಲೇ ಇದ್ದ ಒಬ್ಬ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್ ಎಂದು ಎರಡು ಬಾರಿ ಘೋಷಣೆ ಹಾಕಿದ್ದಾನೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಅಲ್ಲದೆ, ವಿಧಾನಸೌಧದ ಠಾಣೆ ಎದುರು ಮಂಗಳವಾರ ರಾತ್ರಿ ಬಿಜೆಪಿ ಭಾರಿ ಪ್ರತಿಭಟನೆ ನಡೆಸಿತು.

  ಕಾಂಗ್ರೆಸ್​ ವಿರುದ್ಧ ಸಿಡಿದೆದ್ದ ಅಶೋಕ್, ಅಶ್ವತ್ಥ್​ ನಾರಾಯಣ್​!

  ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ಉತ್ತರ ನೀಡಿದ ಪ್ರಿಯಾಂಕ್ ಖರ್ಗೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts