More

  ಜಗದೀಶ್​ ಶೆಟ್ಟರ್​ ಘರ್​ವಾಪ್ಸಿ; ಕಾಂಗ್ರೆಸ್​ನಲ್ಲಿ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ

  ಕೊಡಗು: ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ತೊರೆದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜ್ಯ ರಾಜಕೀಯ ವಲಯದಲ್ಲಿ ಈ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್​ಗೆ ​​​ಯಾವುದೇ ಅನ್ಯಾಯ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

  ಕೊಡಗಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶೆಟ್ಟರ್​ ಅವರು ವಿಧಾನಪರಿಷತ್​ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲಾ. ಅವರಿಗೆ ಕಾಂಗ್ರೆಸ್​ ಪಕ್ಷದಲ್ಲಿ ಯಾವುದೇ ಅನ್ಯಾಯವಾಗಿಲ್ಲ. ಜಗದೀಶ್ ಶೆಟ್ಟರ್ ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು.

  ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಯಾವ ಕಾರಣಕ್ಕೆ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂದು ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಮತ್ತೆ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು, ಆ ನಂತರ ಸಿಕ್ಕಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

  ಇದನ್ನೂ ಓದಿ: ರೀಲ್ಸ್ ಮಾಡ್ತಾ ಫುಲ್‌ ಆ್ಯಕ್ಟೀವ್ ಇದ್ದ ಟೀಚರ್ ಕೊಲೆ ಪ್ರಕರಣ; ಹತ್ಯೆ ಹಿಂದಿನ ಕಾರಣ ಬಿಚ್ಚಿಟ್ಟ ಎಸ್​ಪಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts