More

    ಪುತ್ರ ಯತೀಂದ್ರಗೆ MLC ಪೋಸ್ಟ್​; ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

    ಮೈಸೂರು: ಜೂನ್​ 13ರಂದು ವಿಧಾನಸಭೆಯಿಂದ ವಿಧಾನಪರಷತ್​ಗೆ ನಡೆಯುವ ಚುನಾವಣೆಗೆ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿದ್ದು, ಬಿಜೆಪಿ-ಜೆಡಿಎಸ್​ ಹಾಗೂ ಕಾಂಗ್ರೆಸ್​ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನೂ ಎಂಎಲ್​ಸಿ ಸ್ಥಾನಕ್ಕೆ ಪ್ರಮುಖವಾಗಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹೆಸರು ಕೇಳಿ ಬರುತ್ತಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಹೀಗಿದೆ.

    ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ನಮ್ಮ ಹೈಕಮಾಂಡ್‌ನವರು ನನ್ನ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು.

    ನಾನು ಕೋಲಾರದಿಂದ ಸ್ಪರ್ಧಿಸಬೇಕು ಅಂದುಕೊಂಡಿದ್ದೆ. ಇಲ್ಲ ನೀವು ವರುಣಾದಿಂದ ಸ್ಪರ್ಧೆ ಮಾಡಿ ಅಂತ ಹೇಳಿದರು. ನೀನು ನಿಮ್ಮ ಅಪ್ಪನಿಗೆ ಕ್ಷೇತ್ರ ಬಿಟ್ಟು ಕೊಡಿ ಅಂತ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು. ವರಿಷ್ಠರ ಮಾತಿಗೆ ತಲೆ ಬಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಎಂಎಲ್​ಸಿ ಮಾಡುತ್ತೇನೆ ಅಂತ ವರಿಷ್ಠರು ಹೇಳಿದ್ದರು. ನೋಡಬೇಕು ಏನು ಮಾಡುತ್ತಾರೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts