More

    ಒಂದು ತೋಟದಲ್ಲಿ ನೂರು ಹೂವು ಅರಳಲಿ..; ಡಾಲಿ ಧನಂಜಯ್​ ಸಾಹಿತ್ಯ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 16ರಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಿದ್ದಾರೆ. ಬಜೆಟ್​ ಮಂಡನೆ ಕೆಲವು ಸಿನಿಮಾ ಸಾಲುಗಳನ್ನು ಸಿಎಂ ಪ್ರಸ್ತಾಪಿಸಿದ್ದು, ಎಲ್ಲರ ಗಮನ ಸೆಳೆದಿದೆ. ಆಗದು ಎಂದು ಕೈ ಕಟ್ಟಿ ಕುಳಿತರೆ ಸಾಗದು ಕೆಲವು ಮುಂದೆ.. ಮನಸೊಂದಿದ್ದರೆ ಮಾರ್ಗವು ಉಂಟು, ಕೆಚ್ಚೆದೆ ಇರಬೇಕು ಎಂದೆಂದೂ ಎಂಬ ಡಾ.ರಾಜ್ ಕುಮಾರ್ ಹಾಡಿನ ಮೂಲಕ ಬಜೆಟ್​ ಭಾಷಣವನ್ನು ಆರಂಭಿಸಿದ ಸಿಎಂ ನಟ ರಾಕ್ಷಸ ಡಾಲಿ ಧನಂಜಯ್​ ಬರೆದಿರುವ ಸಾಲುಗಳನ್ನು ಉಲ್ಲೇಖಿಸಿದ್ಧಾರೆ.

    ಕಳೆದ ವರ್ಷ ಮೇ ತಿಂಗಳಲ್ಲಿ ಡಾಲಿ ಧನಂಜಯ್​ ನಿರ್ಮಾಣದ ಡೇರ್​ ಡೆವಿಲ್​ ಮುಸ್ತಾಫಾ ಚಿತ್ರವು ವಿಮರ್ಶಕರಿಂದ ಮತ್ತು ಪ್ರೇಕ್ಷಕರಿಂದ ಮೆಚ್ಚುಗೆ ಉತ್ತಮ ರೆಸ್ಪಾನ್ಸ್​ ಪಡೆದಿತ್ತು. ಕೋಮು ಸಾಮರಸ್ಯವನ್ನು ಸಾರುವ ಕಥೆಯನ್ನು ಆಧಾರವಾಗಿಟ್ಟುಕೊಂಡು ಚಿತ್ರವನ್ನು ಮಾಡಲಾಗಿತ್ತು. ಡಾಲಿ ಧನಂಜಯ್ನ​ ಬರೆದಿದ್ದ ಶಾಂತಿಯ ತೋಟ ಹಾಡು ಎಲ್ಲರ ಗಮನ ಸೆಳೆದಿತ್ತು. ಈ ಹಾಡಿನಲ್ಲಿ ಬರುವ ಒಂದು ಸಾಲು ಈಗ ಬಜೆಟ್ ಪುಸ್ತಕದಲ್ಲಿ ಸ್ಥಾನ ಪಡೆದಿರುವುದು ವಿಶೇಷ.

    ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಅನುದಾನ ಮಂಡಿಸುವುದಕ್ಕೂ ಮುನ್ನ ಒಂದು ತೋಟದಲ್ಲಿ ನೂರು ಹೂವು ಅರಳಲಿ.. ಎಲ್ಲ ಕೂಡಿ ಆಡುವಂಥ ಗಾಳಿ ಬೀಸಲಿ ಸಾಲನ್ನು ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿ ಭಾಷಣ ಮಾಡಿರುವುದು ಮತ್ತಷ್ಟು ವಿಶೇಷವೆನಿಸಿದೆ. ಇದೀಗ ಡಾಲಿ ಧನಂಜಯ್​ ಬರೆದಿರುವ ಸಾಲುಗಳು ಬಜೆಟ್​ ಪುಸ್ತಕದಲ್ಲಿ ಸ್ತಾನ ಪಡೆದಿರುವುದು ಎಲ್ಲರ ಹುಬ್ಬೇರಿಸಿದೆ.

    Siddaramaiah

    ಇದನ್ನೂ ಓದಿ: ಇದೊಂದು ಅಡ್ಡಕಸುಬಿ, ಸಾಲರಾಮಯ್ಯನ ಸೋಗಲಾಡಿ ಬಜೆಟ್​: ಆರ್​. ಅಶೋಕ್​

    ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದರು.

    ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts