‘ಶಂಖದಿಂದ ಬಂದರೆ ಮಾತ್ರ ತೀರ್ಥ’: ಸಿಎಂ ಟೀಕೆ

ಬೆಂಗಳೂರು: ಇಂದು (ಮೇ.04) ಅಕ್ಕಿಆಲೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದು ಯಾವ ಹಣದಲ್ಲಿ ಎನ್ನುವ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ತಿಳಿದಿಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯಿಸುತ್ತೇನೆ” ಎಂದರು.

ಇದನ್ನೂ ಓದಿ: ಮುಂದಿನ 3 ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಸಾಧ್ಯತೆ! ಇಲ್ಲಿದೆ ಅಚ್ಚರಿ ವರದಿ | Gold Price

“ಸರ್ಕಾರಕ್ಕೆ ಎರಡು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಈಗ ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಮಾತನಾಡುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಅಲ್ಲವೇ?” ಎಂದು ಕಿಡಿಕಾರಿದರು.

“ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಬಗ್ಗೆ ಟೀಕಿಸಿರುವ ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು? ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ, ನಮಗಲ್ಲ” ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

ಮುಂದಿನ 3 ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಸಾಧ್ಯತೆ! ಇಲ್ಲಿದೆ ಅಚ್ಚರಿ ವರದಿ | Gold Price

Share This Article

ಕಣ್ಣಿನ ಪೊರೆ ತುಂಬಾ ಹಾನಿಕಾರಕವೇ? ಲಕ್ಷಣಗಳೇನು? ತಡೆಗಟ್ಟುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… Cataract

Cataract : ಕಣ್ಣಿನ ಪೊರೆಯು ಸಾಮಾನ್ಯವಾಗಿ ಕಂಡುಬರುವ ಕಣ್ಣಿನ ಕಾಯಿಲೆಗಳಲ್ಲಿ ಒಂದಾಗಿದೆ. ವಿಶೇಷವಾಗಿ ವಯಸ್ಸಾದಂತೆ ಇದು…

ಬೇಯಿಸಿದ ಮೊಟ್ಟೆಗಳನ್ನು ತಿನ್ನುವುದರಿಂದಾಗುವ ಪ್ರಯೋಜನಗಳು…egg

egg: ಮನುಷ್ಯನ ಆರೋಗ್ಯಕ್ಕೆ ಮೊಟ್ಟೆ ಬಹಳ ಒಳ್ಳೆಯದು. ಹೀಗಾಗಿ ದಿನಾ ಬೆಳಗ್ಗೆ ಬೇಯಿಸಿದ ಮೊಟ್ಟೆ ತಿನ್ನುವ…