More

    ಜಾತಿ, ಧರ್ಮ, ಸಿದ್ಧಾಂತಗಳಿಗೆ ತಳುಕು ಹಾಕದೆ ಮಾನಸಿಕ ಆರೋಗ್ಯಕ್ಕಾಗಿ ಯೋಗ ಮಾಡೋಣ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ‘ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕು ಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ’ ಎಂದು ಸಿದ್ದರಾಮಯ್ಯ ಟ್ವಿಟರ್ ಮೂಲಕ ಕರೆಕೊಟ್ಟಿದ್ದಾರೆ.

    ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್​ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್​ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ. 

    ಯೋಗದಿಂದ ರೋಗ ದೂರ: ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​

    ಬೆಂಗಳೂರು: ವಸುಧೈವ ಕುಟುಂಬಕಂ (ವಿಶ್ವವೇ ಒಂದು ಕುಟುಂಬ) ಎಂಬಂತೆ ಇಂದು ನಾವು ವಿಶ್ವಕ್ಕೆ ಯೋಗವನ್ನು ಹಂಚುತ್ತಿದ್ದೇವೆ. ಯೋಗದಿಂದ ಯಾವುದೇ ರೋಗವೂ ದೂರ ಎಂದು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಹೇಳಿದರು.

    ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯಪಾಲರು ಮಾತನಾಡಿದರು.

    ಇದನ್ನೂ ಓದಿ: ಯೋಗದಿಂದ ರೋಗ ದೂರ: ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಹೇಳಿಕೆ

    ಯೋಗದಿಂದ ರೋಗ ದೂರ

    ಕನ್ನಡಲ್ಲೇ ಎಲ್ಲರಿಗೂ ಸ್ವಾಗತ ಮಾಡಿದ ರಾಜ್ಯಪಾಲರು, ನಮ್ಮ ಗ್ರಂಥಗಳಲ್ಲಿ ಯೋಗದ ಬಗ್ಗೆ ಉಲ್ಲೇಖ ಇದೆ. ಭಾರತವನ್ನು ಯೋಗ ಗುರು ಎಂದು ಕರೆಯುತ್ತಾರೆ. ಭಾರತಕ್ಕೆ ಸೀಮಿತವಾಗಿದ್ದ ಯೋಗವನ್ನು ಪ್ರಧಾನಿ ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋದರು. ಇಂದು ಇಡೀ ವಿಶ್ವವೇ ಯೋಗದಿನವನ್ನು ಆಚರಣೆ ಮಾಡುತ್ತಿದೆ. ಯೋಗ ದಿಂದ ಮನಸ್ಸು ಹಾಗೂ ಆರೋಗ್ಯ ಉತ್ತಮವಾಗಿರುತ್ತದೆ. ವಸುದೈವ ಕುಟುಂಬಕಂ ಎಂಬಂತೆ ಇಂದು ನಾವು ವಿಶ್ವಕ್ಕೆ ಯೋಗವನ್ನು ಹಂಚುತ್ತಿದ್ದೇವೆ. ಇಂದು ನಾವು ಯೋಗಕ್ಕೆ ಶ್ರಮಿಸಿದವರನ್ನು ಸ್ಮರಿಸಬೇಕು. ಯೋಗದಿಂದ ರೋಗವನ್ನು ದೂರ ಮಾಡಬಹುದು. ಎಲ್ಲರೂ ನಿತ್ಯವೂ ಯೋಗ ಮಾಡಿ ಆರೋಗ್ಯವಾಗಿರಿ ಎಂದು ರಾಜ್ಯಪಾಲರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts