ಸಿಎಂ ಸಿದ್ದರಾಮಯ್ಯ ಕೂಡಲೇ ಪಂಚಮಸಾಲಿ ಸಮಾಜದ ಕ್ಷಮೆ ಕೇಳಬೇಕು: ಬಿ.ವೈ.ವಿಜಯೇಂದ್ರ ಒತ್ತಾಯ | B Y Vijayendra

blank

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗಾಗಿ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಸರ್ಕಾರ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ(BY Vijayendra) ಒತ್ತಾಯಿಸಿದರು.

ಈ ಕುರಿತು ಸುವರ್ಣಸೌಧದ ಡಾ. ಬಿ. ಆರ್.‌ ಅಂಬೇಡ್ಕರ್‌ ಪ್ರತಿಮೆ ಬಳಿ ಗುರುವಾರ ಮಾತನಾಡಿರುವ ಅವರು, ”2ಎ ಪ್ರವರ್ಗದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ದುರಾದ್ದೇಶದಿಂದ ಚಳುವಳಿ ನಿರತ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿತ್ತೇನೆ” ಎಂದರು.

ಇದನ್ನೂ ಓದಿ: ಬಸ್​ ದುರಂತ; 7 ಮಂದಿ ಸಾವು..Accidentನ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ

”ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸವಿಲ್ಲವೆಂಬಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಈ ಕೂಡಲೇ ಪಂಚಮಸಾಲಿ ಸಮಾಜದ ಕ್ಷಮೆ ಯಾಚಿಸಿ, ದಬ್ಬಾಳಿಕೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಪರಮಪೂಜ್ಯ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸುವರ್ಣ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಈ ಮುಂಚೆ ಬೆಂಬಲ ಸೂಚಿಸಿದ್ದರು.

ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: CM Siddaramaiah

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಸ್ಪೈಸಿ ಬಟರ್ ಕಿಚಡಿ; ಇಲ್ಲಿದೆ ಸಿಂಪಲ್​ ವಿಧಾನ | Recipe

ಪ್ರತಿ ಬಾರಿ ಮನೆಯಲ್ಲಿ ಸಿಂಪಲ್ ಕಿಚಡಿ ತಿಂದು ಬೇಜಾರಾಗಿದ್ಯಾ. ವಿಶೇಷ ರೀತಿಯ ಹೋಟೆಲ್​ ಸ್ಟೈಲ್​ ಟೇಸ್ಟಿ…

ತುಪ್ಪ ಸೇವಿಸಿದರೆ ಪಿರಿಯಡ್ಸ್​ ನೋವು ಇರುವುದಿಲ್ಲವೇ; ತಜ್ಞರು ಹೇಳೋದೇನು? | Health Tips

ಋತುಚಕ್ರದ ಸಮಯದಲ್ಲಿ ಮಹಿಳೆಯರು ಸಾಮಾನ್ಯವಾಗಿ ನೋವು, ಉಬ್ಬುವುದು ಮತ್ತು ಹೆಪ್ಪುಗಟ್ಟುವಿಕೆಯಂತಹ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಗಳನ್ನು…

ಜಿಮ್​​ಗೆ ಹೋಗದೆ ಮನೆಯಲ್ಲೆ ಮಾಡಿ ಈ 3 ವ್ಯಾಯಾಮ; ಸ್ಲಿಮ್​ ಆಗಲು ಈ ಟಿಪ್ಸ್​​​ | Health Tips

ಸಿನಿಮಾ ನಟಿಯರನ್ನು ನೋಡಿ ನನಗೂ ಅವರಂತಹ ದೇಹಾಕೃತಿ ಇದ್ದಿದ್ದರೆ ಚೆನ್ನಾಗಿರುತಿತ್ತು ಎಂದು ಅನಿಸುತ್ತದೆಯೇ? ಹೌದು ಎಂದಾದರೆ…