‘ರಾಜ್ಯದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು’; ಟ್ವೀಟ್​ನಲ್ಲಿ ಸಿಎಂ ಬಿಚ್ಚಿಟ್ಟ ವಿಷಯವಿದು | BJPvsCongress

blank

ಬೆಂಗಳೂರು: ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆಗೊಳಿಸಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿದ್ದ ಕೇಂದ್ರ ಸಚಿವ ವಿ. ಸೋಮಣ್ಣ, ಈ ದ್ರೋಹವನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಣವೀರ್ ಅಲ್ಲಾಬಾಡಿಯಾ ಮೊಬೈಲ್​ ಸ್ವಿಚ್​ ಆಫ್​​​; ಸಮಯ್​ ರೈನಾಗೆ ಮಾರ್ಚ್​​ 10ರವರೆಗೆ ಗಡುವು | Ranveer Allahbadia

ಟ್ವೀಟ್​ನಲ್ಲಿ ಸಿಎಂ ಹೇಳಿದ ವಿಷಯವಿದು

ಇಲ್ಲಿದೆ ನೋಡಿ ಸತ್ಯ: ಜೆಜೆಎಂ (ಜಲಜೀವನ್ ಮಿಷನ್)ಗೆ ಒಟ್ಟು ಹಂಚಿಕೆ – 49,262 ಕೋಟಿ ರೂ. (ಕೇಂದ್ರದ ಪಾಲು – 26,119 ಕೋಟಿ ರೂ., ರಾಜ್ಯದ ಪಾಲು – 23,142 ಕೋಟಿ ರೂ.). ಬಿಡುಗಡೆಯಾದ ಒಟ್ಟು ಅನುದಾನ – 32,202 ಕೋಟಿ ರೂ. (ಕೇಂದ್ರದ ಪಾಲು – 11,760 ಕೋಟಿ ರೂ., ರಾಜ್ಯದ ಪಾಲು – 20,442 ಕೋಟಿ ರೂ.)

ಕರ್ನಾಟಕದ ಒಟ್ಟು ಖರ್ಚು – 29,413 ಕೋಟಿ ರೂ.

ಕೇಂದ್ರದ ಪಾಲು

  • 26,119 ಕೋಟಿ ರೂ. ಹಂಚಿಕೆ
  • ಕೇವಲ 11,760 ಕೋಟಿ ರೂ. ಬಿಡುಗಡೆಯಾಗಿದೆ. ಶೇ. 45ರಷ್ಟು ಮಾತ್ರ ಬದ್ಧತೆಯನ್ನು ಹೊಂದಿದೆ.

ಇದನ್ನೂ ಓದಿ: ಭಾರತಕ್ಕೆ F-35 ಯುದ್ಧ ವಿಮಾನ ನೀಡಲು ಅಮೆರಿಕ ಸಿದ್ಧ; ಇದು ಶಾಂತಿಗೆ ಒಳ್ಳೆಯದಲ್ಲ ಎಂದಿದ್ದೇಕೆ ಪಾಕ್​​​​ | Pakistan

ರಾಜ್ಯದ ಪಾಲು

  • 23,142 ಕೋಟಿ ರೂ. ಹಂಚಿಕೆ
  • 20,442 ಕೋಟಿ ರೂ. ಬಿಡುಗಡೆ. ಶೇ. 88.3ರಷ್ಟು ಹೆಚ್ಚಿನ ಮೊತ್ತ!

“ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ” ಎಂದರು.

2024-25ನೇ ಸಾಲಿನ ಬಜೆಟ್‌ನಲ್ಲಿ – ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ

  • ಕೇಂದ್ರ ಸರ್ಕಾರವು ಜೆಜೆಎಮ್​ಗೆ 3,804 ಕೋಟಿ ರೂ. ಹಂಚಿಕೆ ಮಾಡಿದೆ. ಆದರೆ ಅದರಲ್ಲಿ 570 ಕೋಟಿ ರೂ. ಮಾತ್ರ ಬಿಡುಗಡೆಯಾಗಿರುತ್ತದೆ.
  • ಈ ವಿಚಾರವಾಗಿ ಹಲವಾರು ಪತ್ರಗಳನ್ನು ಬರೆದು ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿರುವುದಿಲ್ಲ.
  • ಮತ್ತೊಂದೆಡೆ, ಕರ್ನಾಟಕವು ತನ್ನ ಬಜೆಟ್​ನಲ್ಲಿ 7,652 ಕೋಟಿ ರೂ. ಹಂಚಿಕೆ ಮಾಡಿದ್ದು, 4,977 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.ಇದು ಕೇವಲ ಕರ್ನಾಟಕಕ್ಕೆ ಸಂಬಂಧಿಸಿದ್ದು ಮಾತ್ರ ಅಲ್ಲ – ಇದು ದೇಶದ ಎಲ್ಲಾ ರಾಜ್ಯಗಳಿಗೆ ಮಾಡುತ್ತಿರುವ ಅನ್ಯಾಯ ಎಂದು ಕಿಡಿಕಾರಿದರು.

ಇದನ್ನೂ ಓದಿ:Chaitra Vasudevan | ಫಸ್ಟ್​ ಪೇಮೆಂಟ್​​ ಮತ್ತು ಈಗ ಮಾಡುತ್ತಿರುವ ದುಡಿಮೆ ಬಗ್ಗೆ ಚೈತ್ರಾ ವಾಸುದೇವನ್​ ಸೀಕ್ರೆಟ್​​ ರಿವೀಲ್​…!

  • ಜೆಜೆಎಂ (2024-25) ಗಾಗಿ ಅಂದಾಜು ಬಜೆಟ್ – 70,163 ಕೋಟಿ ರೂ.
  • ಪರಿಷ್ಕೃತ ಅಂದಾಜು ಮೊತ್ತವನ್ನು ಕೇವಲ 22,694 ಕೋಟಿ ರೂ.ಗೆ ಇಳಿಸಲಾಗಿದೆ.

“ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಜೆಟ್​ನಲ್ಲಿ ಅಗತ್ಯ ಪ್ರಮಾಣದ ಅನುದಾನ ನೀಡದೆ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಕೊಲ್ಲುತ್ತಿದೆ. ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅನ್ಯಾಯವನ್ನು ಪ್ರಶ್ನಿಸಬೇಕಿದ್ದ ಸಚಿವ ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿಯನ್ನು ಹರಡಿ, ಕನ್ನಡಿಗರಿಗೆ ದ್ರೋಹ ಎಸಗುತ್ತಿದ್ದಾರೆ. ಈ ರೀತಿ ಜನರನ್ನು ದಾರಿ ತಪ್ಪಿಸುವ ಬದಲು, 2024-25 ಸಾಲಿನ ಬಜೆಟ್‌ನಲ್ಲಿ ಜೆಜೆಎಂಗೆ ಹಂಚಿಕೆಯಾಗಿದ್ದ ಪೂರ್ಣ ಅನುದಾನವನ್ನು ಯಾಕೆ ನೀಡಿಲ್ಲ ಎಂದು ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು” ಎಂದು ಆಗ್ರಹಿಸಿದ್ದಾರೆ.

 

“ಬಿಜೆಪಿಯ ಇಂತಹ ಕೃತ್ಯಗಳ ಹೊರತಾಗಿಯೂ ರಾಜ್ಯದಲ್ಲಿ ನಮ್ಮ ಸರ್ಕಾರವು ನುಡಿದಂತೆ ನಡೆದು ಉತ್ತಮ ಸಾಧನೆ ಮಾಡಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿದ್ದರೂ, ಜಲ ಜೀವನ್‌ ಮಿಷನ್‌ ಯೋಜನೆಯ ಮುಖಾಂತರ ಪ್ರತಿ ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ನೀಡಲು ಬದ್ಧವಾಗಿದ್ದೇವೆ” ಎಂದು ಹೇಳಿದರು.

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…