More

    ಕರ್ನಾಟಕದಿಂದಲ್ಲೇ ಬಿಜೆಪಿ ಅವನತಿ ಆರಂಭ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯವನ್ನು ಕಟ್ಟತ್ತೇವೆಂಬ ನಂಚಿಕೆಯಿಂದ ಜನರು ಕಾಂಗ್ರೆಸ್​ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ವಿಧಾನಪರಿಷತ್ತಿನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಯನ್ನು ಉದ್ದೇಶಿಸಿ ಮಾತನಾಡುತ್ತ ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ.

    ಕರ್ನಾಟಕದಿಂದಲೇ ಬಿಜೆಪಿಯ ಅವನತಿ

    ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ರೋಡ್ ಶೋ ಮಾಡಿಸುವುದು ಮತ್ತು ನಡ್ಡಾರವರು ನರೇಂದ್ರ ಮೋದಿಯವರನ್ನು ನೋಡಿ ಮತ ನೀಡಿ ಎಂದರೂ ಜನ ಮತ ನೀಡಲಿಲ್ಲ. ಇನ್ನು ಮುಂದೆ ಪ್ರಧಾನಿ ಮೋದಿಯವರ ಮೇಲೆ ಅವಲಂಬಿತರಾಗಬೇಡಿ. ಅವರು ಬಂದ ಕಡೆಯಲೆಲ್ಲಾ ಬಿಜೆಪಿ ಸೋತಿದೆ.

    1980 ರಲ್ಲಿ ಜನತಾ ಲೋಕದಳದಿಂದ ಲೋಕಸಭಾ ಸ್ಪರ್ಧಿಯಾಗಿದ್ದೆ. ಆ ಸಂದರ್ಭದಲ್ಲಿ ಮಂಜುನಾಥ್ ಎಂಬುವವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು, ಇಂದಿರಾ ಗಂಧಿ ಹೆಸರು ಹೇಳಿ, ಚುನಾವಣೆ ಗೆಲ್ಲುತ್ತೀರಿ ಎಂದು ಅವರಿಗೆ ಹೇಳಿದರು. ಆ ಕಾಲದಲ್ಲಿಯೇ ಇಂದಿರಾಗಾಂಧಿ ಹಸರು ಹೇಳಿದರೆ ಚುನಾವಣೆ ಗೆಲ್ಲುತ್ತಿದ್ದರು.

    ಅಂತೆಯೇ, ಮೋದಿಯವರಿಗೂ ಹೆಸರು ಇತ್ತು. ಆದರೆ ಈಗ ಅದು ಮಂಕಾಗುತ್ತಿದೆ. ಪ್ರಧಾನಿ ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಈಗ ಮಂಕಾಗುತ್ತಿದೆ. ಮೇಲಿದ್ದವರು ಕೆಳಗೆ , ಕೆಳಗಿದ್ದವರು ಮೇಲೆ ಬರಬೇಕು. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಎಂದು ಭವಿಷ್ಯ ನುಡಿದಿದ್ದಾರೆ.

    ಬೆಂಕಿಯಿಡುವುದು ನಮ್ಮ ಪರಂಪರೆಯಲ್ಲ

    ಕರ್ನಾಟಕದ ಒಂದು ಸಾವಿರ ವರ್ಷಗಳ ಪರಂಪರೆಯನ್ನು ಭಾಷಣದಲ್ಲಿ ಮಾಡಿಕೊಟ್ಟಿದ್ದಾರೆ. ಕವಿರಾಜಮಾರ್ಗ ಶ್ರೀ ವಿಜಯ ದಲ್ಲಿ ಪರಧರ್ಮವನ್ನು , ಜೀವನ ಮಾರ್ಗಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದೇ ಆಸ್ತಿ ಮತ್ತುಒಡವೆ ಎಂದು ಅದರಲ್ಲಿ ತಿಳಿಸಿದ್ದಾರೆ. ಅದೇ ಸಮಾಜದ ಆಸ್ತಿ ಎಂದು ಅಲ್ಲಿ ತಿಳಿಸಲಾಗಿದೆ. ನಮ್ಮ ದೇಶದಲ್ಲಿ ಧರ್ಮಗಳು ಬೇರೆ ಇರಬಹುದು . ಆದರೆ ಎಲ್ಲ ಧರ್ಮಗಳ ಸಾರ ಒಂದೇ .

    ಮನುಷ್ಯರ ನಡುವೆ ಗೋಡೆ ಕಟ್ಟುವುದು, ಧರ್ಮಗಳ ನಡುವೆ ಬೆಂಕಿ ಇಡುವುದು ಅಮಾನವೀಯವಾದುದು. ಅದು ನಮ್ಮ ಪರಂಪರೆ ಅಲ್ಲ. ಎಲ್ಲರದರಲ್ಲೂ ವೈರುಧ್ಯಗಳಿದ್ದರೂ , ಏಕತೆಯನ್ನು ಕಾಣಬೇಕು. ಅದರಲ್ಲಿ ನಂಬಿಕೆ ಇಟ್ಟವರು ನಾವು. ಯಾವುದು ಒಂದು ಧರ್ಮ, ಜಾತಿಗೆ ಅಂಟಿಕೊಂಡವರಲ್ಲ.

    Siddaramaiah

    ಇದನ್ನೂ ಓದಿ: VIDEO| ಪ್ರಧಾನಿ ಮೋದಿ ಭಾಷಣ ಕೇಳಿ ಮಹಿಳೆ ಕಣ್ಣಲ್ಲಿ ಆನಂದ ಭಾಷ್ಪ

    ಕಾಂಗ್ರೆಸ್ ಬದ್ಧ

    ಎಲ್ಲ ಧರ್ಮ, ಜಾತಿ, ಆಚಾರಗಳನ್ನು ಗೌರವಿಸುತ್ತೇವೆ. ಮನುಷ್ಯ ಜಾತಿ ತಾನೊಂದೆ ವಲಂ ಎಂದು ಆದಿಕವಿ ಪಂಪ ಹೇಳಿದರು. ನಾವೆಲ್ಲರೂ ಮಾನವತಾವಾದಿಗಳು. ಇದೇ ನಮ್ಮ ಸಂವಿಧಾನದಲ್ಲಿರುವದರಿಂದ , ಸಂವಿಧಾನದ ಹೊರತಾಗಿ ಬೇರೆ ಯಾವುದಕ್ಕೂ ತಲೆಬಾಗುವುದಿಲ್ಲ. ಈ ಸಿದ್ದಾಂತಕ್ಕೆ ಕಾಂಗ್ರೆಸ್ ಪಕ್ಷ ಬದ್ಧತೆಯಾಗಿದೆ. ಇದನ್ನೇ ಜಾತ್ಯಾತೀತೆ ಎಂದು ಸಂವಿಧಾನ ತಿಳಿಸಿದೆ.

    ಭಾರತ ದೇಶದಲ್ಲಿ 142 ಕೋಟಿ ಜನತೆ ಇದೆ. ಅಷ್ಟು ಜನರೆಲ್ಲರೂ ಒಂದೇ , ನಾವೆಲ್ಲಾ ಭಾರತೀಯರೇ . ಯಾರದೋ ಸ್ವಾರ್ಥಕ್ಕಾಗಿ ಜಾತಿ ಮಾಡಲ್ಪಟ್ಟಿತ್ತು. 850 ವರ್ಷಗಳ ಹಿಂದೆಯೆ ಬಸವಣ್ಣನವರು ಹೇಳಿದಂತೆ , ಕಾಯಕ ಮತ್ತು ದಾಸೋಹ. ವೃತ್ತಿಯಲ್ಲಿ ಯಾರು ಮೇಲೂ ಅಲ್ಲ ಕೀಳೂ ಅಲ್ಲ. ಅನುಭವ ಮಂಟಪ ಅಲ್ಲಿಂದಲೇ ಬಂದಿದ್ದು . ವಿಧಾನಮಂಡಲದ ಪರಿಕಲ್ಪನೆ ಅಲ್ಲಿಂದಲೇ ಬಂದಿದೆ.

    ಜಾತಿ ಪದ್ದತಿಯಲ್ಲಿ ಮೇಲೊಬ್ಬ , ಕೆಳಗೊಬ್ಬ ಎಂಬ ಬೇಧಭಾವ ಇದೆ. ವರ್ಟಿಕಲ್​ ಸೊಸೈಟಿಯನ್ನು ಹಾರಿಜಾಂಟಲ್​ ಸೊಟೈಟಿಯಾಗಿ ಮಾಡಬೇಕು. ಮನುಷ್ಯರನ್ನು ಮೇಲೆ ಕೆಳಗೆ ಮಾಡಬಾರದು, ಎಲ್ಲರೂ ಸಮಾನಾಗಿರಬೇಕು ಎಂದು ಆಶಿಸಿದ್ದಾರೆ.

    ಶಕ್ತಿ ಯೋಜನೆಗೆ ಮೆಚ್ಚುಗೆ

    ಧರ್ಮಸ್ಥಳದ ಧರ್ಮಾಧಿಕಾರಿಯವರು ಪತ್ರ ಮುಖೇನ ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಅಲ್ಲಿಗೆ ಬಂದು ಮುಖ್ಯಮಂತ್ರಿಗಳ ಹೆಸರಿನಲ್ಲಿ ಪೂಜೆ ಮಾಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದದಾರೆ . ಮಹಿಳಾ ಮೀಸಲಾತಿ ಹೆಚ್ಚಿಸಿದವರು ಕಾಂಗ್ರೆಸ್ ನವರು. ಈಗ ಮಹಿಳಾ ಮೀಸಲಾತಿ ಮಸೂದೆ ಕೇಂದ್ರ ಸರ್ಕಾರದಲ್ಲಿದ್ದು, ಬಿಜೆಪಿಯವರು ಅದನ್ನು ಮಾಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್ತಿನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಯ ವೇಳೆ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts