More

    ಎನ್​ಡಿಆರ್​ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು: ಸಿಎಂ ಗರಂ

    ಶಿವಮೊಗ್ಗ: ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಪಕ್ಷದ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಪರ ಮತಯಾಚಿಸಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

    “ಬಿಜೆಪಿ ಅವರದ್ದು ಬಡವರ, ರೈತರ, ಮಹಿಳೆಯರ ವಿರುದ್ಧವಾಗಿರುವ ಸರ್ಕಾರ. ಆದ್ದರಿಂದಲೇ ಜನರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ. ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬಿಜೆಪಿ ಸರ್ಕಾರ ಬರಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ ಎರಡು ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಯಿತು” ಎಂದರು.

    “ಎನ್​ಡಿಆರ್​ಎಫ್ ಮಾರ್ಗಸೂಚಿಯಂತೆ ರಾಜ್ಯಕ್ಕೆ 18,172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್​ಡಿಆರ್​ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು. ರಾಜ್ಯಕ್ಕೆ ಆದ ಅನ್ಯಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ನರೇಂದ್ರ ಮೋದಿ ಸರ್ಕಾರ ಕೇವಲ 3,454 ಕೋಟಿ ರೂ.ಗಳನ್ನು ನೀಡಿ ಮತ್ತೆ ಮತ್ತೆ ದ್ರೋಹ ಮಾಡಿದೆ” ಎಂದು ಕಿಡಿಕಾರಿದರು.

    ಹರ್ಷಲ್ ಪಟೇಲ್ ವಿರುದ್ಧ ಸಿಡಿದೆದ್ದ ಯಜುವೇಂದ್ರ ಚಹಲ್! ಕಾಪಿರೈಟ್​​ ಕೇಸ್​ಗೆ ಆಗ್ರಹಿಸಿದ ಸ್ಟಾರ್ ಬೌಲರ್

    ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್​ ಗಂಭೀರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts