More

    ಜೆಡಿಎಸ್​ನವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ: ಸಿಎಂ ಸಿದ್ದರಾಮಯ್ಯ

    ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿ ಮಾಡಿಕೊಳ್ಳುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವ ಸಿದ್ದಾಂತವೂ ಇಲ್ಲ ಅಧಿಕಾರಗೋಸ್ಕರ ಏನು ಬೇಕಾದರೂ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಸಿಎಂ ಒಂದು ಕಾಲದಲ್ಲಿ ನಾವು ಜೆಡಿಎಸ್​ ಬಿಜೆಪಿಯ ಬಿ ಟೀಂ ಎಂದು ಕರೆಯುತ್ತಿದ್ದಾಗ ನಮ್ಮ ವಿರುದ್ಧ ಕೋಪಿಸಿಕೊಳ್ಳುತ್ತಿದ್ದವರು, ಈಗ ಅದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಜಾತ್ಯಾತೀತ ಎಂದು ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಕೈ ಜೋಡಿಸಿದ್ದಾರೆ. ಹಿಂದೆ ದೇವೇಗೌಡರು ಬಿಜೆಪಿ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ, ಈಗ ನೋಡಿದರೆ ಪಕ್ಷದ ಉಳಿವಿಗಾಗಿ ಮೈತ್ರಿ ಅನಿವಾರ್ಯವಾಗಿದೆ ಎಂದು ಜಿ.ಟಿ. ದೇವೇಗೌಡರ ಕಡೆಯಿಂದ ಹೇಳಿಸುತ್ತಿದ್ದಾರೆ.

    ಇದನ್ನೂ ಓದಿ: ಕಾವೇರಿ ಜಲವಿವಾದ; ಕಾಂಗ್ರೆಸ್​ ಓಲೈಕೆ ರಾಜಕಾರಣ ಮಾಡುತ್ತಿದೆ: ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ

    ಜಿ-20 ಶೃಂಗಸಭೆ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸಿದ್ದ ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವನಿಸದೆ ತಪ್ಪು ಮಾಡಿದ್ದಾರೆ. ಅವರು ಎಐಸಿಸಿ ಅಧ್ಯಕ್ಷರಲ್ಲ. ರಾಜ್ಯಸಭೆ ವಿಪಕ್ಷ ನಾಯಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ನನ್ನ ಪ್ರಕಾರ ಅವರನ್ನು ಔತಣಕೂಟಕ್ಕೆ ಆಹ್ವಾನಿಸಬೇಕಿತ್ತು. ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಮಾಡಬಾರದಿತ್ತು ಎಂದು ಆಕ್ಷೇಪಿಸಿದ್ದಾರೆ.

    ರಾಜ್ಯಕ್ಕೆ ಸಂಬಂಧಿಸಿದ ಜಲವಿವಾದಗಳ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಲು ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸಮಯ ಕೇಳಲಾಗಿದೆ. ಆದರೆ, ಈವರೆಗೂ ಅವರು ಸಮಯ ಕೊಟ್ಟಿಲ್ಲ. ಮಹಾದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅರಣ್ಯ ಹಾಗೂ ಪರಿಸರ ಇಲಾಖೆ ವತಿಯಿಂದ NOC ಕೊಡಿಸಿಲ್ಲ. ಅದನ್ನು ಕೊಡಿಸಿದರೆ ನಾವು ಕಾಮಗಾರಿ ಆರಂಭಿಸಲು ಸಿದ್ದರಿದ್ಧೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts