More

    ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಇಂದು (ಜುಲೈ 24) ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ ಎಂದು ಹೇಳಿದರು.

    ಇದನ್ನೂ ಓದಿ: ಮಂತ್ರಿ, ಮುಖ್ಯಮಂತ್ರಿ ಸೇರಿದಂತೆ ಯಾವ ಅಧಿಕಾರದ ಮೇಲೂ ಲಾಬಿ ನಡೆಸಿದ ಇತಿಹಾಸವಿಲ್ಲ: ಬಿಕೆ ಹರಿಪ್ರಸಾದ್ ಟ್ವೀಟ್

    ಇವತ್ತಿನ ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ. ಸಮಾಜದಲ್ಲಿ ಇನ್ನೂ ಶೇ. 25 ರಷ್ಟು ಮಂದಿಗೆ ಶಿಕ್ಷಣ ದೊರೆತಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ಒದಗಿಸಿ ಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ” ಎಂದು ಹೇಳಿದರು.

    ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, “ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಬಹುದು” ಎಂದಿದ್ದರು ಎಂದು ಹೇಳಿದರು.

    ಇದನ್ನೂ ಓದಿ: MLA Kothur Manjunath About Siddu-Dkshi | ಸಿದ್ದು-ಡಿಕೆಶಿಯನ್ನು ಹಾಡಿ ಹೊಗಳಿದ ಶಾಸಕ ಕೊತ್ತೂರು ಮಂಜುನಾಥ್ | KOLAR

    ದುಡಿಯುವ ವರ್ಗಗಳು ಹಸಿವಿನಿಂದ ಮಲಗಿದರೂ ಪರವಾಗಿಲ್ಲ. ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಜನರ ಜೇಬಿನಲ್ಲಿ ಹಣವಿದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೇ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣವಿರುವ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಹೇಳಿದರು.

    ಸುಳ್ಳು ಬರೆದವರನ್ನೂ ನಾನು ಪ್ರಶ್ನಿಸಲ್ಲ. ಇವತ್ತು ಮಾಧ್ಯಮಗಳಲ್ಲಿ ಸತ್ಯ, ನ್ಯಾಯ ಸಿಗತ್ತದೆ ಎನ್ನುವ ಪರಿಸ್ಥಿತಿ ಈಗ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ ಬರೆದರೂ ನಾನು ಯಾಕಪ್ಪಾ ಸುಳ್ಳು ಬರೆಯುತ್ತೀರಾ ಎಂದು ಕೇಳುವುದಿಲ್ಲ. ಜನ ಸಾಮಾನ್ಯರು ಇತರೆ ಮೂಲಗಳಿಂದ ಸತ್ಯ ತಿಳಿದುಕೊಳ್ಳುವಷ್ಟು ಸಮರ್ಥರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಪವನ್​ ಕಲ್ಯಾಣ್​ ನಟನೆಯ ‘ಬ್ರೋ’ ಪ್ರೀ-ರಿಲೀಸ್ ಈವೆಂಟ್‌ಗೆ ಫಿಕ್ಸ್​ ಆಯ್ತು ಸ್ಥಳ, ದಿನಾಂಕ!; ಶುರುವಾಯ್ತು ಫ್ಯಾನ್ಸ್​ ಅಬ್ಬರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts