

ಗದಗ: ಸದ್ಯ ನಾನು ಮುಖ್ಯಮಂತ್ರಿಯಾಗಿದ್ದೇನೆ. ನಾನೇ ಹುದ್ದೆಯಲ್ಲಿ ಮುಂದುವರಿಯಲಿದ್ದೇನೆ. ಐದು ವರ್ಷ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಆಂತರಿಕ ತಲ್ಲಣ ಶುರುವಾಗಿತ್ತು. ಇದೀಗ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ.
ಗದಗದಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಹೇಳಿದರೆ ಬದ್ಧವಾಗಿರುತ್ತೇವೆ ಎಂದು ಹೇಳಿದೆ. ನಾನೇ ಹಾಗೆ ಹೇಳಿದರೆ ಅದು ಬೇರೆ ರೀತಿ ಅರ್ಥವಾಗಿದೆ ಎಂದು ಸ್ಪಷ್ಟನೆ ನೀಡುವ ಮೂಲಕ ಕಾಂಗ್ರೆಸ್ನಲ್ಲಿ ಉಂಟಾಗಿರುವ ಆಂತರಿಕ ಬೇಗುದಿಯನ್ನು ತಣಿಸಲು ಯತ್ನಿಸಿದ್ದಾರೆ.
ನಮದು ಹೈಕಮಾಂಡ್ ಪಕ್ಷ. ಹಾಗಾಗಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ . ಹೈಕಮಾಂಡ್ ಹೇಳಿದರೆ ಅವರ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ ಎಂದು ಹೇಳಿದ್ದೇನೆ. ನಾನೊಂದು ಹೇಳಿದ್ರೆ ನೀವೊಂದು ಬರೆಯುತ್ತೀರಿ ಎಂದು ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ 5 ವರ್ಷ ನಾನೇ ಸಿಎಂ ಎಂದು ಹೇಳಿ ಈಗ ಉಲ್ಟಾ ಹೊಡೆದಿದ್ದಾರೆ.
ಜಾತಿಗಣತಿ ವರದಿ ಇನ್ನೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿಲ್ಲ. ಜಾತಿಗಣತಿ ವರದಿ ಸಲ್ಲಿಸಿದರೆ ಪರಿಶೀಲಿಸಿ ನಿರ್ಧರಿಸುತ್ತೇವೆ. ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ.