ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು, ಕಷ್ಟ ಗೊತ್ತಿರುವ, ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು: CM Siddaramaiah

CM Siddaramaiah

ಬೆಂಗಳೂರು: ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು, ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಆಶಿಸಿದ್ದಾರೆ.

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯ ಮಾಡದೇ ಜಾಗರೂಕತೆಯಿಂದ ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಬೌರಿಂಗ್ ಆಸ್ಪತ್ರೆ ಸುದೀರ್ಘ ಇತಿಹಾಸವನ್ನು ಹೊಂದಿರುವ ಆಸ್ಪತ್ರೆ. ಸಾವಿರಾರು ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಮತ್ತೊಂದು ವೈದ್ಯಕೀಯ ಕಾಲೇಜಿನ ಅಗತ್ಯವನ್ನು ಮನಗಂಡು ಮತ್ತೊಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದೆ ಎಂದರು. ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು ಮತ್ತೊಂದು ವೈದ್ಯಕೀಯ ಕಾಲೇಜು ಆದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ ಆಗಿ, ಸಾಮಾನ್ಯ ಜನರಿಗೆ, ಬಡವರಿಗೆ, ದಲಿತರಿಗೆ ಬಹಳಷ್ಟು ಉಪಯೋಗವಾಗುತ್ತದೆ ಎಂದು ಮನಗಂಡು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದೆ. ಈಗ ಸುಸಜ್ಜಿತವಾದ ವೈದ್ಯಕೀಯ ಕಾಲೇಜು ನಿರ್ಮಾಣವಾಗಿದೆ.

ಎಲ್ಲರಿಗೂ ಬದುಕುವ ಜೀವಿಸುವ ಹಕ್ಕನ್ನು ಸಂವಿಧಾನ ನೀಡಿದೆ

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಾಗಿ ಬರುವವರು ಶ್ರೀಮಂತ ವರ್ಗದವರಲ್ಲ. ಸಾಮಾನ್ಯವಾಗಿ ಬಡವರು, ಕೆಳವರ್ಗದವರು ಮಾತ್ರ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಬಡವರು ದುಬಾರಿ ವೆಚ್ಚವನ್ನು ಕೊಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿಯೇ ಸರ್ಕಾರಿ ಆಸ್ಪತ್ರೆಗಳು ಅಗತ್ಯವಿದೆ. ನನ್ನನ್ನೂ ಒಳಗೊಂಡಂತೆ ಬಹುತೇಕ ರಾಜಕಾರಣಿಗಳು ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ ಎಂದ ಮುಖ್ಯಮಂತ್ರಿಗಳು ಹಣವಿರುವವರು ಎಲ್ಲಿಗೆ ಬೇಕಾದರೂ ಹೋಗಿ ಚಿಕಿತ್ಸೆ ಪಡೆಯಬಹುದು. ಆದರೆ ಬಡವರು ಎಲ್ಲಿಗೆ ಹೋಗಲು ಸಾಧ್ಯ? ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಜೀವಿಸುವ ಹಕ್ಕಿದೆ ಎಂದು ಸ್ಪಷ್ಟವಾಗಿ ತಿಳಸಲಾಗಿದೆ. ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು.

ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪನೆಯ ಗುರಿ

ಹಿಂದೆ ಹಣಕಾಸು ಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪಿಸುವ ತೀರ್ಮಾನ ಮಾಡಲಾಗಿತ್ತು. ಈಗ ಪ್ರಸ್ತುತ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿರುವುದರಿಂದ ಹಾಗೂ ಎಲ್ಲ ಸಮುದಾಯದವರಿಗೂ ಪ್ರಾತಿನಿಧ್ಯ ದೊರಕಲು ಇಂತಹ ಆಸ್ಪತ್ರೆಗಳಲ್ಲಿ ವೈದ್ಯರು ಕಾರ್ಯನಿರ್ವಹಿಸಲು ಮೀಸಲಾತಿ ವ್ಯವಸ್ಥೆಯಾಗುತ್ತದೆ. ಸೂಕ್ತ ಅವಕಾಶ ದೊರೆತರೆ, ಎಲ್ಲರೂ ಜೀವನದಲ್ಲಿ ಅಭಿವೃದ್ಧಿ ಹೊಂದಬಹುದಾಗಿದೆ. ಸಮಾಜದಲ್ಲಿ ಅಶಕ್ತರಿಗೆ ಬದುಕುವ ಅವಕಾಶವನ್ನು ಸರ್ಕಾರ ಕಲ್ಪಿಸುತ್ತಿದೆ ಎಂದು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ ದೊರೆಯಬೇಕು

300 ಕೋಟಿ ರೂ. ವೆಚ್ಚದಲ್ಲಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು ಶಂಕುಸ್ಥಾಪನೆ ಮಾಡಿ, ನಮ್ಮ ಅವಧಿಯಲ್ಲಿಯೇ ಉದ್ಘಾಟನೆಯನ್ನೂ ನೆರವೇರಿಸಲಾಗುವುದು. ಉತ್ತಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಪಾಲಿಸುವುದರಿಂದ ಸದೃಢ ಆರೋಗ್ಯವನ್ನು ಪಡೆಯಬಹುದಾಗಿದೆ. ಕ್ಯಾನ್ಸರ್ ರೋಗಕ್ಕೆ ಆರಂಭಿಕ ಹಂತದಲ್ಲಿದ್ದರೆ ಗುಣಪಡಿಸಬಹುದಾಗಿದೆ. ವೈಜ್ಞಾನಿಕ ಸಂಶೋಧನೆಗಳಿಂದ ಅನೇಕ ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗುತ್ತಿದೆ. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ವಹಣೆ, ಸ್ವಚ್ಛತೆ ಉತ್ತಮವಾಗಿರಬೇಕು, ಉತ್ತಮ ಆರೋಗ್ಯ ಸೇವೆ ದೊರೆಯುವಂತಾಗಬೇಕು. ಉತ್ತಮ ಜನಸಂಪರ್ಕ ಹೊಂದುವುದರಿಂದ ಆಸ್ಪತ್ರೆಗೆ ಸಾರ್ವಜನಿಕರಿಂದ ದೇಣಿಗೆಯೂ ದೊರೆತಾಗ, ಗುಣಮಟ್ಟದ ಸೇವೆಗಳನ್ನು ಆಸ್ಪತ್ರೆ ನೀಡಲು ಸಹಾಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

 

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…