More

  ಕರ್ನಾಟಕದಿಂದ ಯಾರೂ ಪ್ರಧಾನಿ ಹುದ್ದೆಯ ರೇಸ್​ನಲ್ಲಿ ಇಲ್ಲ: ಸಿಎಂ ಸಿದ್ದರಾಮಯ್ಯ

  ಬೆಂಗಳೂರು: ಹಾಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ನೇತೃತ್ವದ ಇಂಡಿಯಾ ಮೈತ್ರಿಕೂಟ ಗೆದ್ದು ಸರ್ಕಾರ ರಚಿಸುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  ರಾಜ್ಯ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆ ಪ್ರೆಸ್​​ ಕ್ಲಬ್​ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಾಹಿಸಿ ಮಾತನಾಡಿದ ಸಿಎಂ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ ಎಂದರೂ 20 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

  ಗುಜರಾತಿನ ಮಾದರಿಯನ್ನು ಮುಂದಿಟ್ಟುಕೊಂಡು ನರೇಂದ್ರ ಮೋದಿ ದೇಶದ ಪ್ರಧಾನಿಯಾದಂತೆ ಕರ್ನಾಟಕದ ಮಾದರಿಯನ್ನು ಪ್ರಸ್ತಾಪಿಸಿ ರಾಜ್ಯದಿಂದ ಪ್ರಧಾನಿ ಹುದ್ದೆಯ ರೇಸ್‌‍ನಲ್ಲಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಅಭ್ಯರ್ಥಿ ಅಂತಾ ಕರ್ನಾಟಕದಿಂದ ಯಾರೂ ಇಲ್ಲ. ಕೇಂದ್ರದಲ್ಲಿ INDIA ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ನಮ್ಮ ಕಾರ್ಯಕ್ರಮಗಳ ಜಾರಿ ಆಧಾರದಲ್ಲಿ ಚರ್ಚಿಸಿ ಪ್ರಧಾನಮಂತ್ರಿ ಯಾರಾಗಬೇಕು ಎನ್ನುವುದನ್ನು ನಿರ್ಧರಿಸುತ್ತೇವೆ ಎಂದು ಉತ್ತರಿಸಿದ್ದಾರೆ.

  ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆಯಡಿ 201 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 4.10 ಕೋಟಿ ಫಲಾನುಭವಿಗಳಿಗೆ 5,754 ಕೋಟಿ ರೂ.ಗಳನ್ನು ಬ್ಯಾಂಕ್‌ ಖಾತೆಗೆ ಜಮಾಗೊಳಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 1.60 ಕೋಟಿ ಮನೆಗಳಿಗೆ ಉಚಿತ ವಿದ್ಯುತ್‌ಗಾಗಿ 7,436 ಕೋಟಿ ರೂ. ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.20 ಕೊಟಿ ಯಜಮಾನಿಯರಿಗೆ 20,293 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದ್ದು, ಯುವನಿಧಿಯಡಿ 1,57,255 ನೋಂದಣಿಯಾಗಿದ್ದಾರೆ ಎಂದು ವಿವರಿಸಿದ್ದಾರೆ.

  ಕರ್ನಾಟಕದಿಂದ ಯಾರೂ ಪ್ರಧಾನಿ ಹುದ್ದೆಯ ರೇಸ್​ನಲ್ಲಿ ಇಲ್ಲ: ಸಿಎಂ ಸಿದ್ದರಾಮಯ್ಯ

  ಇದನ್ನೂ ಓದಿ: ಅಪಘಾತದಲ್ಲಿ ಇಬ್ಬರನ್ನು ಕೊಂದ ಅಪ್ರಾಪ್ತನಿಗೆ ವಿಚಿತ್ರ ಶಿಕ್ಷೆ; ಆಕ್ಸಿಡೆಂಟ್​ ಬಗ್ಗೆ ಪ್ರಬಂಧ, ಪೊಲೀಸರ ಜತೆ ಕೆಲಸ… ಇದೊಂದು ಶಿಕ್ಷೆನಾ?

  ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವುದರ ಜೊತೆಗೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಕಳೆದ ಬಜೆಟ್‌ನಲ್ಲಿ 54 ಸಾವಿರ ಕೋಟಿ ರೂ.ಗಳ ಬಂಡವಾಳ ವೆಚ್ಚದ ಬದಲಾಗಿ 56 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ನೀರಾವರಿಗೆ 14,369 ಕೋಟಿ ರೂ.ಗಳ ಬದಲಾಗಿ 18,198 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಶೇ.99.20 ಯಷ್ಟು ಅನುದಾನ ಬಳಕೆಯಾಗಿದೆ. ರಾಜ್ಯಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಅಪಪ್ರಚಾರದಲ್ಲಿ ಯಾವುದೇ ಹುರುಳಿಲ್ಲ. ಆರ್ಥಿಕವಾಗಿ ಸಬಲವಾಗಿರುವುದಕ್ಕಾಗಿಯೇ ಪಂಚಖಾತ್ರಿಗಳು ಮತ್ತು ಯೋಜನಾ ವೆಚ್ಚಗಳನ್ನು ಹಿಂದಿನ ಸರ್ಕಾರಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲಾಗಿದೆ.

  ಪರಿಶಿಷ್ಟರ ಬಗ್ಗೆ ಕಾಳಜಿ ವಹಿಸುವ ಪ್ರಧಾನಮಂತ್ರಿಯವರು ದೇಶಾದ್ಯಂತ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಎಸ್‌‍ಇಪಿ ಮತ್ತು ಟಿಎಸ್‌‍ಪಿ ಕಾಯ್ದೆಯನ್ನು ಏಕೆ ಜಾರಿಗೊಳಿಸಲಿಲ್ಲ? ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ನೀಡಲಾಗುತ್ತಿದೆ ಎಂದು ಪ್ರಧಾನಿಯವರು ಅಪ್ಪಟ ಸುಳ್ಳು ಹೇಳುತ್ತಿದ್ದಾರೆ. ಹಿಂದಿನ ಬೊಮಾಯಿ ಅವರ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಸುಪ್ರೀಂಕೋರ್ಟ್‌ನ ವಿಚಾರಣೆ ವೇಳೆ ಯಥಾಸ್ಥಿತಿಯನ್ನು ಮುಂದುವರೆಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದೆ. ಈವರೆಗೂ ಅದೇ ವ್ಯವಸ್ಥೆ ಮುಂದುವರೆದಿದೆ.

  ರಾಜಕೀಯ ಮತ್ತು ಮತಗಳಿಕೆಗೆ ಜನರನ್ನು ದಿಕ್ಕು ತಪ್ಪಿಸುವ ಸತ್ಯಕ್ಕೆ ದೂರವಾದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.ಭ್ರಷ್ಟಾಚಾರ ನಿರ್ಮೂಲನೆಗೆ ತಮ ಸರ್ಕಾರ ಬದ್ಧವಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‌‍ಐ ನೇಮಕಾತಿ ಅಕ್ರಮ ಕೋವಿಡ್‌ ಸಂದರ್ಭದಲ್ಲಿ ನಡೆದ ಖರೀದಿ ಅವ್ಯವಹಾರ ಶೇ.40 ರಷ್ಟು ಕಮಿಷನ್‌ ದೂರ ಸೇರಿದಂತೆ ಹಲವು ದೂರುಗಳ ತನಿಖೆಗೆ ವಿಚಾರಣಾ ಆಯೋಗ ರಚಿಸಲಾಗಿದೆ. ಪಿಎಸ್‌‍ಐ ಹಗರಣದ ವರದಿ ಬಂದಿದ್ದು, ಉಳಿದೆರೆಡು ಹಗರಣಗಳ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts