More

    ಅನ್ನಭಾಗ್ಯ ಯೋಜನೆಯಡಿ ಹಣ ವರ್ಗಾವಣೆಗೆ ಸಿಎಂ ಚಾಲನೆ

    ಬೆಂಗಳೂರು:  ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್  ಅವರು ಚಾಲನೆ ನೀಡಿದರು.

    ಐದು ಕೆಜಿ ಅಕ್ಕಿ ಜತೆಗೆ ಉಳಿದ 5 ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದು ಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿ ಲೋಗೋ ಕೂಡ ಬಿಡುಗಡೆ ಮಾಡಿದರು.

    ಅನ್ನಭಾಗ್ಯ ಯೋಜನೆಯಡಿ ಹಣ ವರ್ಗಾವಣೆಗೆ ಸಿಎಂ ಚಾಲನೆ

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ 10 ಕೆಜಿ ಅಕ್ಕಿಯ ಪೈಕಿ ಐದು ಕೆಜಿ ಅಕ್ಕಿಯ 170 ರೂ. ಹಣವನ್ನು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಹಂತ ಹಂತವಾಗಿ ಇಡೀ ರಾಜ್ಯದ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ.

    ಮಾತನಾಡಿದ ಸಿದ್ದರಾಮಯ್ಯ, ​ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು ಮನಮೋಹನ್​ ಸಿಂಗ್ ನೇತೃತ್ವದ ಯುಪಿಎ ಸರ್ಕಾರ. ಮೊದಲ ಸಂಪುಟದಲ್ಲೇ ಐದು ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದ್ದೆವು. ನಮ್ಮ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆ. ರಾಜ್ಯದ 1.28 ಕೋಟಿ ಕುಟುಂಬಕ್ಕೆ ಅನ್ನಭಾಗ್ಯ ಯೋಜನೆ ತಲುಪುತ್ತದೆ. ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ ಎಂದಿದ್ದಾರೆ.

    ಅನ್ನಭಾಗ್ಯ ಯೋಜನೆಯಡಿ ಹಣ ವರ್ಗಾವಣೆಗೆ ಸಿಎಂ ಚಾಲನೆ

    ಅಂತ್ಯೋದಯ, BPL ಕಾರ್ಡ್​ದಾರರು ಸೇರಿ 4.42 ಕೋಟಿ ಜನರಿಗೆ ಅನುಕೂಲವಾಗಲಿದೆ. ನಾವು ಹೆಚ್ಚುವರಿಯಾಗಿ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿಲ್ಲ. ಒಟ್ಟು 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿದ್ದೆವು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts