ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ: ಸಿಎಂ ಸಿದ್ದರಾಮಯ್ಯ

Siddaramaiah Budget
Published on

ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು (Budget) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು (ಮಾರ್ಚ್ 07) ಮಂಡಿಸಲಿದ್ದು, ರಾಜ್ಯದ ಇತಿಹಾಸದಲ್ಲಿ ದಾಖಲೆಯ 16ನೇ ಬಜೆಟ್ಅನ್ನು ಮಂಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ಜನಸಾಮಾನ್ಯರ ನಿರೀಕ್ಷೆ ಹೆಚ್ಚಿದ್ದು, ಬಜೆಟ್​ಗೂ ಮುನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಹೇಳಿದ್ದಾರೆ.

ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಗ್ಯಾರಂಟಿ ಭವಿಷ್ಯ ನಿರ್ಧಾರ: ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಕ್ಕೆ ತೊಂದರೆಯಾಗಿದೆ ಎಂಬ ಚರ್ಚೆ ಜನಜನಿತ. ಕಾಂಗ್ರೆಸ್ ಶಾಸಕರೂ ಸಮಯ ಸಿಕ್ಕಾಗಲೆಲ್ಲ ಈ ಅಭಿಪ್ರಾಯವನ್ನು ಮುಕ್ತವಾಗಿ ಹೊರಹಾಕಿದ್ದಾರೆ. ಆದರೆ, ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೊಂಡೇ ಬಂದಿದ್ದಾರೆ. ಈ ಕಾರಣಕ್ಕೆ 2025-26ನೇ ಸಾಲಿನ ಬಜೆಟ್​ನಲ್ಲಿ ಗ್ಯಾರಂಟಿಗಳಿಗೆ ಎಷ್ಟು ಹಣ ಮೀಸಲಿಡುತ್ತಾರೆಂಬ ಕುತೂಹಲವಿದೆ. ಲಭ್ಯ ಮಾಹಿತಿ ಪ್ರಕಾರ ಗ್ಯಾರಂಟಿ ಯೋಜನೆಗಳ ವಿಸ್ತಾರಕ್ಕೆ ಅವಕಾಶ ಕೊಡದೇ ಪ್ರಸಕ್ತ ಆರ್ಥಿಕ ಸಾಲಿನ ಪ್ರಮಾಣದಲ್ಲೇ ಮುಂದುವರಿಸಲು ತೀರ್ವನಿಸಲಾಗಿದೆ.

ಬಜೆಟ್ ಘೋಷಣೆ ಸಾಧ್ಯತೆ

  • ಗ್ಯಾರಂಟಿಗಳಿಗೆ 53 ಸಾವಿರ ಕೋಟಿ ರೂ. ಅನುದಾನ ಕ್ಯಾಪ್, ಅಲೆಮಾರಿ ಕುರಿಗಾಹಿಗಳ ರಕ್ಷಣೆಗಾಗಿ ಕಾನೂನು
  • ಬೆಂಗಳೂರು ಮೆಟ್ರೋಗೆ ಡಬಲ್ ಡೆಕ್ಕರ್ ಮೆಲ್ಸೇತುವೆ, ಗಿಗ್ ವರ್ಕರ್​ಗಳಿಗೆ ಅನುಕೂಲತೆಗೆ ಕಾನೂನು ಚಾವಡಿ
  • ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗೆ ಹೊಸ ಕೊಡುಗೆ, ಹಿಂದುಳಿದ ವರ್ಗದ ಮಕ್ಕಳಿಗೆ ಯುಪಿಎಸ್ಸಿ ತಯಾರಿಗೆ ಆಶ್ರಯ
  • ಮಾನವ- ವನ್ಯಜೀವಿ ಸಂಘರ್ಷ ತಡೆಗೆ ದೀರ್ಘಾವಧಿ ಕಾರ್ಯಕ್ರಮ, ಮತ್ತಷ್ಟು ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ ಮೂಲಕ ಬಲ
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ, ಪ್ರವಾಸೋದ್ಯಮಕ್ಕೆ ಪಿಪಿಪಿ ಮಾದರಿ ಮೂಲಸೌಕರ್ಯಕ್ಕೆ ಒತ್ತು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net