ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ, ಹೆಚ್ಚಿನ ಸಂಖ್ಯೆಯಲ್ಲಿ ರೈತರು ತೊಡಗಿಕೊಳ್ಳಬೇಕು: CM Siddaramaiah

CM Siddaramaiah

ಬೆಳಗಾವಿ: ಇಡೀ ದೇಶದಲ್ಲಿ ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದ್ದಾರೆ.

ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ, ಡಿಸೆಂಬರ್ 23, 24, 25 ರಂದು ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದ್ದು, ಪೂರ್ವಭಾವಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದ್ದೇವೆ.

ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೋಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ. ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

Siridhanya Mela

Allu Arjun ಪ್ರಕರಣದಲ್ಲಿ ಮೇಜರ್​ ಟ್ವಿಸ್ಟ್​​; ದೂರು ಹಿಂಪಡೆಯಲು ಮುಂದಾದ ಮೃತಳ ಪತಿ, ಜಾಮೀನು ಮಂಜೂರು ಮಾಡಿದ ಕೋರ್ಟ್​

ದರ್ಶನ್​ & ಗ್ಯಾಂಗ್​ಗೆ ಜಾಮೀನು ಮಂಜೂರು; Renukaswamy ತಂದೆ ಹೇಳಿದ್ದಿಷ್ಟು

Share This Article

ಅಧಿಕ ಬಿಪಿ ಇರುವವರು ಯಾವ ಆಹಾರದಿಂದ ದೂರವಿರಬೇಕು ಎಂದು ನಿಮಗೆ ತಿಳಿದಿದೆಯೇ? high blood pressure

high blood pressure: ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಬಿಪಿ ಸಮಸ್ಯೆಯೂ ಒಂದು. ಅಧಿಕ…

ಶಿವನ ಕೃಪೆಗೆ ಪಾತ್ರರಾಗಲು ಈ ಒಂದು ಕೆಲಸ ಮಾಡಬೇಕು! Lord Shiva Worship

Lord Shiva Worship: ಪರಮೇಶ್ವರ ಹಿಂದೂಗಳು ಹೆಚ್ಚು ಪೂಜಿಸುವ ದೇವರುಗಳಲ್ಲಿ ಒಂದಾಗಿದೆ. ಭಗವಂತನನ್ನು ಒಂದೊಂದು ಸ್ಥಳದಲ್ಲಿ…

ಈ ದಿನಾಂಕಗಳಂದು ಜನಿಸಿದ ಮಹಿಳೆಯರು ತಮ್ಮ ಗಂಡನಿಗೆ ಅದೃಷ್ಟ ಹೊತ್ತು ತರುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ…