ಆಸ್ಪತ್ರೆಗೆ ತೆರಳಿ ಎಸ್​.ಎಂ ಕೃಷ್ಣ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

cm
Published on

ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಹಿರಿಯರಾದ ಎಸ್​.ಎಂ ಕೃಷ್ಣ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹಾರೈಸಿದರು.

ಏಪ್ರಿಲ್ 22ರಂದು ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್​ ಆಗಿದ್ದರು. ಏಪ್ರಿಲ್ 29 ರಂದು ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net