More

    ಶ್ರೀನಿವಾಸ ಪ್ರಸಾದ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಅಗಲಿದ ನಾಯಕನಿಗೆ ಕಂಬನಿ

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಅಶೋಕಪುರಂನ ಎನ್​ಟಿಎಂ ಶಾಲೆಯ ಆವರಣಕ್ಕೆ ಆಗಮಿಸಿ ಹಾಲಿ ಸಂಸದ ಶ್ರೀನಿವಾಸಪ್ರಸಾದ್ ಅವರ ಅಂತಿಮ ದರ್ಶನ ಪಡೆದರು. ಪ್ರಸಾದ್ ಅವರ ಪತ್ನಿ, ಪುತ್ರಿಯರು, ಅಳಿಯಂದಿರಿಗೆ ಸಾಂತ್ವನ ಹೇಳಿದರು.

    ಇದನ್ನೂ ಓದಿ: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು; ಪ್ರಾಣಾಪಾಯದಿಂದ ಪಾರು

    ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.

    ಶ್ರೀನಿವಾಸ ಪ್ರಸಾದ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಅಗಲಿದ ನಾಯಕನಿಗೆ ಕಂಬನಿ

    ಅಂತಿಮ ದರ್ಶನ ಪಡೆದು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶ್ರೀನಿವಾಸ್ ಪ್ರಸಾದ್ ಅವರ ನಿಧನ ದುಃಖ ತಂದಿದೆ. ಆರೋಗ್ಯ ಸುಧಾರಿತ್ತೆ ಎಂದು ಭಾವಿಸಿದ್ದೆ. ಆದರೆ ವಿಧಿ ಆಟ ಬೇರೆಯಿತ್ತು. ಎರಡು ಅವಧಿ ಬಿಟ್ಟರೆ ಅವರು ನಾವು ಜೊತೆಗೆ ರಾಜಕಾರಣ ಮಾಡಿದವರು ಎಂದು ಹೇಳಿದರು.

    ಶಾಸಕನಾಗಲು ಟಿಕೆಟ್ ಕೊಡಿಸಿದವರು: ನನಗೆ ಮೊದಲ ಬಾರಿಗೆ ಟಿಕೆಟ್ ಸಿಕ್ಕಾಗ ನನಗೆ ಬೆಂಬಲವಾಗಿ ನಿಂತಿದ್ರು. ಶ್ರೀನಿವಾಸ್ ಪ್ರಸಾದ್ ಸಂಸದನಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ನಾನು ವಿಶ್ವನಾಥ್ ಮುಂತಾದವರು ಅವರಿಗೆ ಕಾರ್ಯದರ್ಶಿಯಾಗಿದ್ದವು. ನಾನು ಮೊದಲ ಬಾರಿ ಶಾಸಕನಾಗಲು ಟಿಕೆಟ್ ಕೊಡಿಸಿದವರು. ರಾಜಕಾರಣದಲ್ಲಿ ನನ್ನ ಪರವಾಗಿ ಸದಾ ನಿಂತಿದ್ದ ವ್ಯಕ್ತಿ. ನಾನು ಸಚಿವನಾಗಲು ಶ್ರೀನಿವಾಸ್ ಪ್ರಸಾದ್ ಹೋರಾಟ ಮಾಡಿದ್ದರು. ನಂಬಿದ ವ್ಯಕ್ತಿಯನ್ನು ಎಂದು ಬಿಟ್ಟು ಕೊಡುತ್ತಿರಲಿಲ್ಲ. ಶ್ರೀನಿವಾಸ್ ಪ್ರಸಾದ್​ಗೆ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

    ಚಾಮರಾಜನಗರ ಲೋಕಸಭೆ ಕ್ಷೇತ್ರದ ಹಾಲಿ ಸಂಸದ ಶ್ರೀನಿವಾಸ್​ ಪ್ರಸಾದ್​ ಅವರ ಅಂತಿಮ ದರ್ಶನ ಪಡೆದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಚಾಮರಾಜನಗರ ಮೈಸೂರು ಜಿಲ್ಲೆಗೆ ರಜೆ ಘೋಷಿಸಲಾಗಿದೆ. ಸ್ನೇಹಕ್ಕೆ ಮತ್ತೊಂದು ಹೆಸರು ಶ್ರೀನಿವಾಸ್ ಪ್ರಸಾದ್. ಅವರು ಯಾವುದೇ ಪಕ್ಷದಲ್ಲಿದ್ರು ನನ್ನ ಅವರ ಸಂಬಂಧ ಉತ್ತಮವಾಗಿತ್ತು ಎಂದು ಹೇಳಿದರು.

    ಶಾಲಾ ಕಾಲೇಜುಗಳಿಗೆ ನಾಳೆ ರಜೆ

    ಚಾಮರಾಜನಗರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
    ಪೂರ್ವ ನಿಗದಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ ಏ. 30ರಂದು ರಜೆ ಘೋಷಣೆ ಮಾಡಲಾಗಿದೆ. ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆ್ಯಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಈ ಕುರಿತಂತೆ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಸರ್ಕಾರ ಆದೇಶಿಸಿದೆ.

    ಪಂಜಾಬ್​: 48 ಕೆ.ಜಿ ಮಾದಕ ವಸ್ತು ವಶ, ಮೂವರ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts