More

    ಸಿಎಂ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ

    ಹುಬ್ಬಳ್ಳಿ: ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿರುವ 6 ತಿಂಗಳ ಆಡಳಿತದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

    ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಎಂಬುದೊಂದು ಇದೆ ಎಂದು ಯಾರಿಗೂ ಅನಿಸುತ್ತಿಲ್ಲ. ದುಡ್ಡು ತಿಂದು ವರ್ಗಾವಣೆ ಮಾಡಿರುವುದರಿಂದ ಅಧಿಕಾರಿಗಳಲ್ಲಿ ಭಯ ಇಲ್ಲವಾಗಿದೆ. ಇದೇ ಕಾರಣಕ್ಕೆ ಬೆಳಗಾವಿಯ ಹೊಸ ವಂಟಮುರಿ, ಕೋಲಾರ ಜಿಲ್ಲೆ ಮಾಲೂರಿನಂಥ ಘಟನೆಗಳು ನಡೆದಿವೆ. ಇಂಥ ಅಮಾನವೀಯ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿತ್ತು. ನಡೆದ ಮೇಲೆ ತನಿಖೆ ನಡೆಸುವುದು ದೊಡ್ಡ ಸಂಗತಿಯಲ್ಲ ಎಂದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರಬೇಕಾದ ಅನುದಾನ, ಹಣಕಾಸು ನೆರವು ನೀಡುತ್ತಿಲ್ಲ ಎಂದು ಹೇಳುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಆಯಾ ಯೋಜನೆಗೆ ಸಂಬಂಧಿಸಿದಂತೆ ಇಲಾಖೆಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡುತ್ತಿದೆ. ಕೇಂದ್ರ ಸರ್ಕಾರ, ರಾಜ್ಯಕ್ಕೆ ನೀಡಿರುವ ಅನುದಾನ, ಪರಿಹಾರ, ಆರ್ಥಿಕ ನೆರವಿನ ಬಗ್ಗೆ ಸದ್ಯದಲ್ಲೇ ನಾವು ಲೆಕ್ಕ ಕೊಡುತ್ತೇವೆ ಎಂದು ಹೇಳಿದರು.

    ಲೋಕಸಭೆ ಚುನಾವಣೆಯಲ್ಲಿ ನನಗೆ ಆಸಕ್ತಿಯೂ ಇಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಈ ಅಭಿಪ್ರಾಯವನ್ನು ಈಗಾಗಲೇ ಹತ್ತು ಬಾರಿ ಹೇಳಿದ್ದೇನೆ ಎಂದು ಉತ್ತರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts