More

    ಕಾಂಗ್ರೆಸ್​ ನಾಯಕರ ಮನೆ ಮೇಲೆ ನಡೆಯುವ ದಾಳಿ ಬಿಜೆಪಿಗರ ಮೇಲೆ ಏಕಿಲ್ಲ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ವಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಜಾರ್ಖಂಡ್​ನ ಕಾಂಗ್ರೆಸ್​ ಸಂಸದ ಧೀರಜ್ ಪ್ರಸಾದ್ ಸಾಹು ಅವರ ನಿವಾಸ ಸೇರಿದಂತೆ ಸಂಬಂಧಿಸಿದ ಸ್ಥಳಗಳಲ್ಲಿ 300 ಕೋಟಿ ರೂಪಾಯಿಗೂ ಅಧಿಕ ನಗದು ವಶಪಡಿಸಿಕೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹೌಹಾರಿದ್ದಾರೆ.

    ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಬಂಧಿಸಿ ಭಾರತವನ್ನು ಇಸ್ಲಾಮಿಕ್ ರಾಷ್ಟವನ್ನಾಗಿ ಮಾಡುತ್ತೇವೆ ಎಂದ ಪಾಕ್ ಸೇನೆಯ ಅಧಿಕಾರಿ; ವಿಡಿಯೋ ವೈರಲ್

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ನಂತರ ಕಾಂಗ್ರೆಸ್​ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿವೆ. ಕಾಂಗ್ರೆಸ್​ ನಾಯಕರ ಮನೆ ಮೇಲೆ ನಡೆಯುವ ದಾಳಿ ಬಿಜೆಪಿಗರ ಮೇಲೆ ಏಕಿಲ್ಲ. ಅವರ ಬಳಿಯೂ ಅಕ್ರಮ ಸಂಪತ್ತು ಸಂಗ್ರಹವಾಗಿದ್ದು, ಅವರ ಮನೆಗಳ ಮೇಲೆ ತನಿಖಾ ಸಂಸ್ಥೆಗಳು ದಾಳಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    ಕಪ್ಪು ಹಣವನ್ನು ಯಾರೇ ಸಂಗ್ರಹಿಸಿದ್ದರು ಅದು ತಪ್ಪು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾನೂನಿನ ಪ್ರಕಾರ ಕೆಲಸ ಮಾಡಲಿ ಱದು ಬಿಟ್ಟು ಕಾಂಗ್ರೆಸ್​ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದು ಸರಿಯಲ್ಲ ಇದು ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts