ಯಾದಗಿರಿ : ಕರ್ನಾಟಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.14 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಪ್ರವಾಸವು ಕೆಳಗಿನಂತಿದೆ ಎಂದು ಸರ್ಕಾರದ ವಿಶೇಷ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.
2025ರ ಜೂನ್ 14ರ ಶನಿವಾರ ರಂದು ಬೆಳಿಗ್ಗೆ 11.55 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಯಾದಗಿರಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ, ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ವತಿಯಿಂದ ಆಯೋಜಿಸಿರುವ, ಕರ್ನಾಟಕ ಸರ್ಕಾರದ ವತಿಯಿಂದ 440.68 ಕೋ.ರೂ.ಗಳ ವೆಚ್ಚದಲ್ಲಿ “ಆರೋಗ್ಯ ಆವಿಷ್ಕಾರ” ಯೋಜನೆಯಡಿ ಕಲ್ಯಾಣ ಕರ್ನಾಟಕ ವಿಭಾಗದ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಕಾರ್ಯಕ್ರಮ ಹಾಗೂ ಯಾದಗಿರಿ ಜಿಲ್ಲಾ ಬಂಜಾರಾ ಭವನದ ಉದ್ಘಾಟಿಸುವರು. ನಂತರ ಕಲಬುರಗಿಗೆ ಪ್ರಯಾಣ ಬೆಳೆಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.