ವಿರೋಧ ಪಕ್ಷದ ನಾಯಕ ಇಲ್ಲದೆ ಚರ್ಚೆಯಾಗಿದ್ದು ಇದೇ ಪ್ರಥಮ; ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ: ಸಿಎಂ

Untitled design - 2023-07-20T165948.456
Published on

ಬೆಂಗಳೂರು: ವಿಧಾನಸಭೆ ಸದನದಲ್ಲಿ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕರಿಲ್ಲದೆ ನಡೆದ ಚರ್ಚೆ ಕುರಿತು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

"ನಾನು 14 ಬಾರಿ ಬಜೆಟ್ ಮಂಡನೆ ಮಾಡಿದ್ದೇನೆ. ಈ ರೀತಿ ಮೊದಲ ಬಾರಿಗೆ ವಿರೋಧ ಪಕ್ಷದ ಸದಸ್ಯರು ಇಲ್ಲದೆ ಉತ್ತರ ನೀಡುತ್ತಿದ್ದೇನೆ. ಇಂಥ ಪರಿಸ್ಥಿತಿ ಬಂದಿದ್ದು, ಬಹಳ ದುಃಖದ ವಿಷಯ. ವಿರೋಧ ಪಕ್ಷದ ನಾಯಕ ಇಲ್ಲದೆ ಚರ್ಚೆಯಾಗಿದ್ದು, ಇದೇ ಮೊದಲು. ಕರ್ನಾಟಕದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಬಿಜೆಪಿ ರಾಜಕೀಯ ದಿವಾಳಿಯಾಗಿದೆ" ಎಂದು ಹೇಳಿದರು.

"ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಇವರಿಂದ ಸಾಧ್ಯವಾಗಿಲ್ಲ. ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ, ಸಂಸದೀಯ ವ್ಯವಸ್ಥೆ, ಸಂವಿಧಾನದ ಮೇಲೆ ನಂಬಿಕೆ ಇಲ್ಲ" ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net