ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಆ.19ಕ್ಕೆ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸಲಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ತಕ್ಷಣವೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಾರೆ ಎಂದು ಭಾವಿಸಿದ್ದೆವು. ಆದರೆ, ಎಲ್ಲಾ ಮೌಲ್ಯಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಅಂಟಿಕೊಂಡು ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
15 ತಿಂಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ನಡಿಗೆ ಭ್ರಷ್ಟಾಚಾರದ ಕಡೆಗೆ ಘೋಷಣೆಯನ್ನು ರಾಜ್ಯದ ಜನರು ಮಾತನಾಡುತ್ತಿದ್ದರೂ ಅವರಿಗೆ ನಾಚಿಕೆ ಆಗುತ್ತಿಲ್ಲ ಎಂದರು.
ಕಾಂಗ್ರೆಸ್ ಗ್ಯಾರಂಟಿ ಅಂದರೆ, ಭ್ರಷ್ಟಾಚಾರ ಮುಕ್ತ ಗ್ಯಾರಂಟಿ ಎಂದು ಜನ ಭಾವಿಸಿದ್ದರು. ಆದರೆ, ಈಗ ರೈತರ, ದಲಿತರ ಸಾವುಗಳು ಗ್ಯಾರಂಟಿ ಆಗಿವೆ. ಜನರ ಅಪೇಕ್ಷೆಗೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.
ಸಿದ್ದರಾಮಯ್ಯ ಅವರು ಸ್ವತಃ ಕ್ಲೀನ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರು ಯಾವ ರೀತಿಯಲ್ಲಿ ಕ್ಲೀನ್ ಎನ್ನುವುದು ಜನರಿಗೆ ಗೊತ್ತಾಗಿದೆ. ಕಳೆದ ಬಾರಿ ಅವರು ಸಿಎಂ ಆಗಿದ್ದಾಗ ಹ್ಯೂಬ್ಲೆಟ್ ವಾಚ್‌ನಿಂದ ಹಿಡಿದು ಡಿನೋಟಿಫಿಕೇಶನ್ ರೀಡುವರೆಗೆ 65 ಕೇಸುಗಳಿದ್ದವು. ಅವೆಲ್ಲವನ್ನೂ ಅವರು ಎಸಿಬಿ ಮೂಲಕ ಮುಚ್ಚಿ ಹಾಕಿಸಿದ್ದರು ಎಂದು ಟೀಕಿಸಿದರು.
ರಾಜ್ಯಪಾಲರು, 3 ಖಾಸಗಿ ದೂರುಗಳನ್ನು ಪರಿಶೀಲಿಸಿ, ಕಾನೂನು ತಜ್ಞರ ಜೊತೆ ಚರ್ಚಿಸಿ ಈಗ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ. ಇದನ್ನು ಕಾಂಗ್ರೆಸ್ಸಿನವರು ಸ್ವಾಗತಿಸಬೇಕಿತ್ತು. ನಾನೇನೂ ತಪ್ಪು ಮಾಡಿಲ್ಲ. ತನಿಖೆಗೆ ತಯಾರಿರುವುದಾಗಿ ಸಿದ್ದರಾಮಯ್ಯನವರು ಹೇಳಬೇಕಿತ್ತು. ಆದರೆ ಅವರು ಎಲ್ಲ ಮೌಲ್ಯಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ ಎಂದರು.
ವಿಧಾನಸಭೆ ಅಧಿವೇಶನದಲ್ಲಿ ಮೂಡಾ ಹಗರಣ ಪ್ರಸ್ತಾಪಿಸಲು ಅವಕಾಶ ನೀಡದೆ, ಉತ್ತರವನ್ನು ಕೊಡದೆ ಸಿಎಂ ಪಲಾಯನ ಮಾಡಿದ್ದಾರೆ. ಜೊತೆಗೆ ಪ್ರಕರಣ ಮುಚ್ಚಿಹಾಕಲು ಬೇಕಾದವರನ್ನು ನೇಮಿಸಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಬೆಂಬಲಿಸಿದೆ. ಯಾವ ನೈತಿಕತೆ ಇಟ್ಟುಕೊಂಡು ಇವರು ಹೋರಾಟ ಮಾಡುತ್ತಾರೆ? ಎಂದು ಪ್ರಶ್ನಿಸಿದರು.
ಹಿಂದೆ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ, ಎಲ್.ಕೆ.ಅಡ್ವಾಣಿ ಮೇಲೆ ಆರೋಪ ಬಂದಾಗ ಬಿಜೆಪಿ ಹೈಕಮಾಂಡ್ ರಾಜೀನಾಮೆಗೆ ಸಲಹೆ ನೀಡುವ ಮೂಲಕ ಆದರ್ಶದ ನಡೆಯನ್ನು ಇಟ್ಟಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದು, ಭ್ರಷ್ಟಾಚಾರವನ್ನು ಪೋಷಣೆ ಮಾಡುತ್ತಿದೆ. ಇವರ ಅಜೆಂಡಾವೇ ಭ್ರಷ್ಟಾಚಾರ ಎಂದರು.
ಮುಡಾ ಹಗರಣದಲ್ಲಿ ನಾನು ಯಾವುದಕ್ಕೂ ಸಹಿ ಹಾಕಿಲ್ಲ, ದಾಖಲೆ ನೋಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಅವರೇ 62 ಕೋಟಿ ರೂ. ಕೊಡಿ ಎಂದು ಹೇಳಿರುವಾಗ ಅದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಸಿದ್ದರಾಮಯ್ಯ ಈಗ ಕಾನೂನಿಗೆ ತಲೆಬಾಗಬೇಕು. ಕಾಂಗ್ರೆಸ್ ಸರ್ಕಾರ, ದೆಹಲಿ ಹೈಕಮಾಂಡ್‌ಗೆ ಎಟಿಎಂ ಆಗುವುದನ್ನು ನಿಲ್ಲಿಸಬೇಕು ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಒಳಗೊಂದು ಹೊರಗೊಂದು ನಿಲುವು ಇಟ್ಟುಕೊಂಡಿದ್ದಾರೆ. ತಾವು ಸಿಎಂ ಆಗಬೇಕೆಂದು ಅವರು ಹೇಳುತ್ತಲೇ ಇದ್ದಾರೆ. ಹಾಗಾದರೆ ಇದರ ಮರ್ಮ ಏನು? ಮುಂದೆ ಮುಖ್ಯಮಂತ್ರಿ ಯಾರಾಗಬೇಕೆಂಬುದು ಅವರ ಪಕ್ಷಕ್ಕೆ ಬಿಟ್ಟ ನಿರ್ಧಾರ. ಮಲ್ಲಿಕಾರ್ಜುನ ಖರ್ಗೆ ಅವರು ಸುದೀರ್ಘ ರಾಜಕೀಯ ಹಿನ್ನೆಲೆ ಹಾಗೂ ಕಾನೂನು ಪ್ರಕಾರ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳಿರುವುದು ಸರಿ ಇದೆ ಎಂದರು.
ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಕು.ಮಂಜುಳಾ ಅವರು ಸುದ್ದಿಗೋಷ್ಠಿಯಲ್ಲಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ
You Might Also Like
ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿಕ್ಸ್ | Health Tips
ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…
ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips
ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…
ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker
Pressure Cooker : ಪ್ರೆಶರ್ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…